ಡೈರಿ ಆಫ್ ಮಣಿಪುರ ಚಿತ್ರದ ನಾಯಕಿಯಾಗಿ ಆಯ್ಕೆ
ಪ್ರಯಾಗರಾಜ್: ಆಕರ್ಷಕ ಕಣ್ಣು, ಕೃಷ್ಣ ವರ್ಣ, ಮುಗ್ಧ ನಗುವಿನ ಮೂಲಕ ಎಲ್ಲರನ್ನು ಸೆಳೆಯುತ್ತಿರುವ ಈಕೆಯ ಹೆಸರು ಮೊನಾಲಿಸಾ. ಮಧ್ಯಪ್ರದೇಶದ ಇಂದೋರ್‌ನ ಬಂಜಾರ ಬುಡಕಟ್ಟು ಸಮುದಾಯಕ್ಕೆ ಸೇರಿದ ಈಕೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಳು.
ಕಳೆದ ಐದು ದಿನಗಳಿಂದ ಸಾಮಾಜಿಕ ಜಾಲತಾಣ ತೆರೆದರೆ ಸಾಕು ಈಕೆಯದ್ದೆ ಮಾತು. ಈಕೆಯ ಸೌಂದರ್ಯಕ್ಕೆ ಜನ ಮಾರು ಹೋಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ.
ಹೌದು… ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ, ಜಪಮಾಲೆ ಸೇರಿದಂತೆ ನಾನಾ ರೀತಿ ಸರಗಳನ್ನು ಮಾರುತ್ತಿದ್ದ ಈ ಬೆಡಗಿಯ ವಿಡಿಯೊವೊಂದನ್ನು ಇನ್‌ಫ್ಲೂಯೆನ್ಸರ್ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಲ್ಲಿಂದ ಶುರುವಾದ ಈಕೆಯ ಹವಾ ಪ್ರತಿ ವಿಡಿಯೋ ಮಿಲಿಯನ್‌ಗಟ್ಟಲೆ ವೀಕ್ಷಣೆಯಾದವು. ಈಕೆಯ ಸರಳ ಸೌಂಧರ್ಯಕ್ಕೆ ಮೆಚ್ಚಿರುವ ನೆಟ್ಟಿಗರು ಮಹಾ ಕುಂಭಮೇಳದ ಮೊನಾಲಿಸಾ ಎಂದು ಕರೆದಿದ್ದಾರೆ.
ಇನ್ನೂ ಬಾಲಿವುಡ್ ಸಹ ಈಕೆಯ ಸೌಂದರ್ಯಕ್ಕೆ ಮಾರು ಹೋಗಿದ್ದು, ಈ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಿಸಿದೆ. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾವನ್ನು ಸನೋಜ್ ಮಿಶ್ರ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ಕುಂಭಮೇಳದ ಮೊನಾಲಿಸ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಅಲ್ಲದೆ ಮೊನಾಲಿಸಾಗೆ ನಟನಾ ತರಬೇತಿಯನ್ನೂ ಸಹ ಕೊಡಿಸಲಾಗುತ್ತಿದೆ.
ಸ್ಯಾಂಡಲ್‌ವುಡ್ ನಟ ಶಿವರಾಜ ಕುಮಾರ ಅವರು ನಟಿಸುತ್ತಿರುವ ತೆಲಗು ಚಿತ್ರದಲ್ಲೂ ಮೊನಾಲಿಸಾಗೆ ಒಂದು ಪಾತ್ರ ನೀಡಲಾಗುವುದು ಎಂದು ಸಹ ಬಾಲಿವುಡ್ ಹಾಗೂ ಟಾಲಿವುಡ್‌ನಲ್ಲಿಯೂ ಪಿಸು ಪಿಸು ಮಾತುಗಳು ಶುರುವಾಗಿವೆ.
ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವರಿಗೆ ಸಿನಿಮಾ ಅವಕಾಶಗಳು ಲಭಿಸುವುದು ಇದು ಮೊದಲೇನೂ ಅಲ್ಲ. ಈ ಹಿಂದೆ ಬೀದಿಯಲ್ಲಿ ಹಾಡು ಹಾಡುತ್ತಿದ್ದ ರಾನು ಮಂಡಲ್‌ಗೆ ಬಾಲಿವುಡ್ ಸಿನಿಮಾ ಹಾಡು ಹಾಡುವ ಅವಕಾಶ ನೀಡಲಾಗಿತ್ತು. ಇದರಿಂದಾಗಿ ರಾನು ಮಂಡಲ್ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿಬಿಟ್ಟಿ ದ್ದರು. ಕೇರಳದಲ್ಲಿ ಮೀನು ಮಾರುತ್ತಿದ್ದ ಯುವತಿಗೆ ಫ್ಯಾಷನ್ ಶೋನಲ್ಲಿ ಶೋ ಸ್ಟಾಪರ್ ಮಾಡಲಾಗಿತ್ತು. ಮಲಯಾಳಿ ನಟಿ ಪ್ರಿಯಾ ವಾರಿಯರ್ ಕೂಡ ಸ್ಟಾರ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಕಣ್ಸನ್ನೆಯ ಒಂದು ಸಣ್ಣ ಕ್ಲಿಪ್‌ನಿಂದಲೇ. ಇದೀಗ ಮಹಾಕುಂಭದ 16 ವರ್ಷ ವಯಸ್ಸಿನ ಬೆಡಗಿ ಮೊನಾಲಿಸಾಳ ಸರದಿ.