ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಮೇಘಶ್ರೀ ರಾಜೇಶ್ ನಿರ್ಮಾಣದ ಈ ಚಿತ್ರಕ್ಕೆ ಜೆ.ವಿ.ಆರ್ ದೀಪು ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಹಾಂತೇಶ್‍ಗೆ ನಾಯಕಿಯಾಗಿ ರಶ್ಮಿತ R ಗೌಡ ನಟಿಸಿದ್ದು, ಪಿ.ಡಿ. ಸತೀಶ್, ಜಹಾಂಗೀರ್, ವಿಜಯ್ ಚೆಂಡೂರು, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಮಹಾಂತೇಶ್, ‘ನಾನು ಜನರಿಗೆ ಪರಿಚಯವಾಗಿದ್ದೇ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಇಂದು ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾನು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ನಾವು ಕೆಲವು ಸ್ನೇಹಿತರು ಸೇರಿ ಈ ಸಿನಮಾದ ಕುರಿತು ಆಲೋಚಿಸುತ್ತಿದ್ದಾಗ, ನಾನು ಈ ಚಿತ್ರದ ನಾಯಕ ಅಂತ ನಿರ್ಧಾರವಾಗಿರಲಿಲ್ಲ. ನಂತರ ಎಲ್ಲರೂ ನೀನೇ ಈ ಪಾತ್ರ ಮಾಡು ಎಂದರು. ನಂತರ ನಮ್ಮ ಚಿತ್ರದ ನಿರ್ಮಾಣಕ್ಕೆ ರಾಜೇಶ್ ಅವರು ಮುಂದಾದರು. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು.
ನಿರ್ದೇಶಕ ದೀಪು, ‘ಲೂಸಿಯಾ’ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದರಂತೆ. ‘ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದೊಂದು ಗ್ರಾಮೀಣ ಸೊಗಡಿನ ಪ್ರೇಮಕಥೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ’ ಎಂದರು.
‘ಅರಸಯ್ಯನ ಪ್ರೇಮ ಪ್ರಸಂಗ’ ಚಿತತ್ರಕ್ಕೆ ಪ್ರವೀನ್ ಮತ್ತು ಪ್ರದೀಪ್ ಬಿ.ವಿ ಸಂಗಿತ ಸಂಯೋಜಿಸಿದ್ದು, ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣವಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…