ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್. ಮಹೇಂದರ್, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.
ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್ ಚಿತ್ರ ಮಾಡುತ್ತಿರುವ ಸುದ್ದಿ ಇದೆ.
ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.
ಈ ಹಿಂದೆ, ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್’ ಮತ್ತು ‘ಶಿವಾಜಿ ಸುರತ್ಕಲ್ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್ ಸ್ಕ್ರೀನ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಅವರ ಸಂಕಲನವಿದೆ.
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…