ಎರಡು ತಿಂಗಳ ಹಿಂದೆಯೇ ತನಿಷಾ ಕುಪ್ಪುಂಡ ಅಭಿನಯದಲ್ಲಿ ‘ಪೆನ್ ಡ್ರೈವ್’ ಎಂಬ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭಭಾಗಿರುವುದಷ್ಟೇ ಅಲ್ಲ, ಚಿತ್ರತಂಡಕ್ಕೆ ಮಾಲಾಶ್ರೀ ಸಹ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರೆ, ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು.
‘ಪೆನ್ ಡ್‍ರೈವ್’ ಚಿತ್ರದಲ್ಲಿ ಮಾಲಾಶ್ರೀ ಅವರ ಪಾತ್ರವೇನು? ಈ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿಲ್ಲ. ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ ಎಂದಷ್ಟೇ ಹೇಳಲಾಗಿದೆ. ಮಾಲಾಶ್ರೀ ಅವರು ‘ಆ್ಯಕ್ಷನ್ ಕ್ವೀನ್’ ಎಂದೇ ಜನಪ್ರಿಯರು. ಇದುವರೆಗೂ ಹಲವಾರು ಚಿತ್ರಗಳಲ್ಲಿ ಪೊಲೀಸ್ ಪಾತ್ರಗಳಲ್ಲಿ ಕಾಣಿಸಿಕೊಂಡವರು. ಈ ಚಿತ್ರದಲ್ಲೂ ಅವರು ಪೊಲೀಸ್ ಪಾತ್ರವನ್ನೇ ಮುಂದುವರೆಸಿರಬಹುದಾ? ಎಂಬ ಪ್ರಶ್ನೆಯೊಂದು ಎದ್ದಿದೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ಮಾಲಾಶ್ರೀ ಜೊತೆಗೆ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪುಂದ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತನಿಷಾ ಈಗಾಗಲೇ ಕೆಲವು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಮಾಲಾಶ್ರೀ ಮತ್ತು ತನಿಷಾ ಕುಪ್ಪುಂಡ ಜೊತೆಗೆ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿ. ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆಯುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸುತ್ತಿದ್ದಾರೆ.
ಆರ್.ಎಚ್. ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಸೆಬಾಸ್ಟಿನ್ ಡೇವಿಡ್ ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…