ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ.
ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ಟ್ರೇಲರ್ ಮೂಲಕ ನಿರೀಕ್ಷೆ ಮಟ್ಟ ಹೆಚ್ಚಿಸಿರುವ ಎಆರ್‌ಎಂ ಸಿನಿಮಾ, ಇದೀಗ 3D ಮೂಲಕ ಚಿತ್ರಮಂದಿರದತ್ತ ಆಗಮಿಸುತ್ತಿದೆ. ನಟ ಟೊವಿನೋ ಥಾಮಸ್ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.
ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್‌ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇಂದು ಬಿಡುಗಡೆಯಾದ ಎಲ್ಲ
ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…