su from so
ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್ ಸೋ’ ಪಾತ್ರವಾಗಿದೆ.
‘ಸು ಫ್ರಮ್ ಸೋ’ ಚಿತ್ರವು ಮಲಯಾಳಂಗೆ ಡಬ್ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್ ಅವರ ವೇಫೇರರ್ ಸಿನಿಮಾಸ್ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.
ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್ ಸೋ’ ಸಹ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಲಿದೆ.
ಇದಾದ ನಂತರ ಹಿಂದಿಗೂ ಚಿತ್ರ ಡಬ್ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.
ಒಂದು ಕಡೆ ಬೇರೆ ಭಾಷೆಗಳಿಗೆ ಡಬ್ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.
‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…