ಮನರಂಜನೆ

ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಂದ ಹಾಗೆ, ಈ ಚಿತ್ರದ ಹೆಸರು ‘ಮಂಗಳಾಪುರಂ’.

‘ರುದ್ರ ಗರುಡ ಪುರಾಣ’ ಚಿತ್ರದ ನಂತರ ರಿಷಿ ನಟಿಸಲಿರುವ ಹೊಸ ಚಿತ್ರದ ಹೆಸರು ‘ಮಂಗಳಾಪುರಂ’. ಮರ್ಡರ್‍ ಮಿಸ್ಟ್ರಿಯಾಗಿದ್ದು, ನಂಬಿಕೆ – ಮೂಡನಂಬಿಕೆ, ಕೈವಾಡ ಹಾಗೂ ಪವಾಡಗಳ ಸುತ್ತ ಕಥೆ ಸಾಗಲಿದೆ. ವಿಶೇಷವೆಂದರೆ, ರಿಷಿ ಜೊತೆಯಲ್ಲಿ ಕಾಶಿನಾಥ್ ಪುತ್ರ ಅಭಿಮನ್ಯು‌ ಕಾಶಿನಾಥ್ ಸಹ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಿಷಿ ಮತ್ತು ಅಭಿ ಪಾತ್ರವೇನು ಎಂದು ಚಿತ್ರತಂಡ ಗೌಪ್ಯವಾಗಿಟ್ಟಿದೆ.

‘ಮಂಗಳಾಪುರಂ’ ಚಿತ್ರವನ್ನು ಪ್ರಸನ್ನ ತಂತ್ರಿ ಮೂಡಬಿದ್ರೆ ಹಾಗೂ‌ ರಾಮ್ ಪ್ರಸಾದ್ ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಕಾಲಿಡುತ್ತಿದ್ದಾರೆ. ಸದ್ಯ ಚಿತ್ರದ ಮೊದಲ ನೋಟ ಮಾತ್ರ ಬಿಡುಗಡೆಯಾಗಿದೆ. ಇನ್ನು, ಚಿತ್ರೀಕರಣವೇನಿದ್ದರೂ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ಈ ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಸದ್ಯಕ್ಕೆ ಆಯ್ಕೆ ನಡೆಯುತ್ತಿದ್ದು, ಆದಷ್ಟು ಬೇಗ ಕಲಾವಿದರ ಮತ್ತು ತಂತ್ರಜ್ಞರ ಕುರಿತು ಚಿತ್ರತಂಡ ಮಾಹಿತಿ ನೀಡಲಿದೆಯಂತೆ.

ಈ ಚಿತ್ರಕ್ಕಾಗಿ ಬೆಂಗಳೂರು ಅಲ್ಲದೆ ಕಾರ್ಕಳ, ತೀರ್ಥಹಳ್ಳಿ‌, ಮಡಿಕೆರಿ ಮುಂತತಾದ ಕಡೆ ಚಿತ್ರೀಕರಣ ನಡೆಯಲಿದೆ. ಅನೂಪ್ ಸಿಳೀನ್ ಸಂಗೀತ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

3 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

3 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

3 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

3 hours ago