manju swaraj
‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ ಚಿತ್ರವಾಗಿತ್ತು. ಇದೀಗ ಅವರು 1970ರ ಕಾಲಘಟ್ಟದ ಕಥೆಯೊಂದನ್ನು ಚಿತ್ರ ಮಾಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ಮಂಜು ನಿರ್ದೇಶನದ ಹೊಸ ಚಿತ್ರದ ಹೆಸರು ‘ಸರಳ ಸುಬ್ಬರಾವ್’. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಈ ಚಿತ್ರದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ- ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಈ ಪೈಕಿ ಒಂದು ಪ್ರೇಮಗೀತೆ ಇದೀಗ ಸರಿಗಮ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆಯಾಗಿದೆ. ಈ ಹಾಡನ್ನು ಕವಿರಾಜ್ ಬರೆದಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಮಂಜು ಸ್ವರಾಜ್, ‘’ಸರಳ ಸುಬ್ಬರಾವ್’ ನಮ್ಮ ಚಿತ್ರದ ನಾಯಕ-ನಾಯಕಿಯ ಹೆಸರು. ಇದು 1971ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ರೆಟ್ರೊ ಶೈಲಿಯ ಕಥೆ ಈ ಚಿತ್ರದಲ್ಲಿದೆ. ಈ ಕಥೆಯನ್ನು ನಾನು ನಿರ್ಮಾಪಕ ಲೋಹಿತ್ ಅವರ ಮುಂದೆ ಹೇಳಿದಾಗ ಅವರು ಕೇಳಿ ತುಂಬಾ ಮೆಚ್ಚಿಕೊಂಡರು. ಈ ಕಥೆಗೆ ಅಜೇಯ್ ರಾವ್ ಅವರೆ ಸೂಕ್ತ ನಾಯಕ ಎನಿಸಿತು. ಅವರು ಕೂಡ ಒಪ್ಪಿಕೊಂಡರು. ಇನ್ನೂ ನಮ್ಮ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ನನ್ನ ಅಂದಾಜಿನ ಪ್ರಕಾರ ಕನ್ನಡದಲ್ಲಿ ತುಂಬಾ ವರ್ಷಗಳಿಂದ ಇಂತಹ ಕಥೆ ಬಂದಿಲ್ಲ’ ಎಂದು ಹೇಳಿದರು.
ಈ ಚಿತ್ರದಲ್ಲಿ ನಟಿಸಿರುವುದು ನನ್ನ ವೈಯ್ಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ ಎಂದ ಅಜೇಯ್ ರಾವ್, ‘ಇದೊಂದು ಸುಂದರ ಸಾಂಸಾರಿಕ ಚಿತ್ರ. ಈ ಚಿತ್ರ ಭಾರತೀಯ ಚಿತ್ರರಂಗದ ಸುವರ್ಣ ಯುಗಕ್ಕೆ ಟ್ರಿಬ್ಯುಟ್ ಎಂದರು ತಪ್ಪಾಗಲಾರದು. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ಮುಂತಾದ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೋ ಅಂದುಕೊಳ್ಳುತ್ತಿದ್ದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ಏಕೆಂದರೆ ಇದು 50 ವರ್ಷಗಳ ಹಿಂದೆ ನಡೆಯುವ ಕಥೆ. ಈ ಚಿತ್ರದಲ್ಲಿ ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ಡಾ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದ್ದೇನೆ. ಎಷ್ಟು ಜನಕ್ಕೆ ಸಿಗುತ್ತದೆ ಇಂತಹ ಅವಕಾಶ. ಇಂತಹ ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಧನ್ಯವಾದ’ ಎಂದರು ನಾಯಕ ಅಜೇಯ್ ರಾವ್.
‘ಸರಳ ಸುಬ್ಬರಾವ್’ ಚಿತ್ರದಲ್ಲಿ ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಮುಂತಾದವರು ನಟಿಸಿದ್ದು, ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ, ಬಸವರಾಜ್ ಅರಸ್ ಸಂಕಲನವಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…