ಮನರಂಜನೆ

ʻಗಾರ್ಡನ್ʼಗೆ ಹೊರಟ ಮನೋಜ್‍: ಕಸ ವಿಲೇವಾರಿ ಮಾಫಿಯಾದ ಸುತ್ತ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್‍ ಅಭಿನಯಸ ‘ಗಾರ್ಡನ್‍’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ.

‘ಗಾರ್ಡನ್‍’ ಚಿತ್ರಕ್ಕೆ ಆರ್ಯ ಮಹೇಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಈ ಚಿತ್ರವನ್ನು ಎಂ.ಆರ್. ಸಿನಿಮಾಸ್ ಬ್ಯಾನರ್ ಮೂಲಕ ಜಿ. ಮುನಿರಾಜು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ದಿನಕರ್ ತೂಕದೀಪ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಇದನ್ನು ಓದಿ : ಕಿರುಚಿತ್ರ ‘ಅಮೃತಾಂಜನ್’ ಈಗ ಸಿನಿಮಾ ಆಯ್ತು …

ಇದು ಪೌರಕಾರ್ಮಿಕರ ಬದುಕನ್ನು ಕಟ್ಟಿಕೊಡುವ ಒಂದು ಚಿತ್ರವಾಗಿದ್ದು, ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಆರ್ಯ ಮಹೇಶ್, ʻಈ ಸಲ ಕೂಡಾ ನಾನು ನೈಜ ಕಥಾವಸ್ತುವನ್ನು ಕೈಗೆತ್ತಿಕೊಂಡಿದ್ದೇನೆ. ಬೆಂಗಳೂರಿನ ಡಂಪಿಂಗ್ ಯಾರ್ಡ್ಗಳನ್ನು ʻಗಾರ್ಡನ್ʼ ಅಂತಾ ಕರೀತಾರೆ. ನಮ್ಮ ಚಿತ್ರದ ಬಹುತೇಕ ನಡೆಯೋದು ಕಸ ವಿಲೇವಾರಿ ವಿಚಾರದ ಸುತ್ತ. ಹೀಗಾಗಿ ಗಾರ್ಡನ್ ಎಂದು ಹೆಸರಿಟ್ಟಿದ್ದೇನೆ ಎಂದರು.

ಕೋವಿಡ್ ನಂತರ ಚಿತ್ರರಂಗ ಬದಲಾಗಿದೆ ಎಂದ ಮನೋಜ್‍, ‘ಜನ ಜಗತ್ತಿನ ಎಲ್ಲಾ ಭಾಷೆಯ ಸಿನಿಮಾಗಳನ್ನು ನೋಡುತ್ತಾರೆ. ಭಿನ್ನ ಕಥಾವಸ್ತುವನ್ನು ಮಾತ್ರ ಒಪ್ಪಿಕೊಳ್ಳುತ್ತಾರೆ. ಹೀಗಾಗಿ, ನಾವು ಯಾರಿಗೂ ಗೊತ್ತಿಲ್ಲದ ವಿವರಗಳನ್ನು, ವಿಶೇಷವಾಗಿ ಹೇಳಲೇಬೇಕಿದೆ. ‘ಗಾರ್ಡನ್’ ಮೂಲಕ ಬೆಂಗಳೂರಿನ ಹೇಳದ ಕಥೆಯನ್ನು ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದರು.

ಈ ಚಿತ್ರದಲ್ಲಿ ಮನೋಜ್‍ಗೆ ಅನು ಪ್ರೇಮಾ ಮತ್ತು ಸೋನಮ್ ರೈ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಮುಂಜಾನೆ ಮಂಜು ಛಾಯಾಗ್ರಹಣವಿದ್ದು, ಅಕ್ಟೋಬರ್ ಮೊದಲ ವಾರದಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago