ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’, ಶುಕ್ರವಾರ ಇಡೀ ದೇಶಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚಿತ್ರ, ಬಿಡುಗಡೆಯಾದ ಮೂರು ದಿನಗಳಲ್ಲಿ ಮಾಡಿದ ಕಲೆಕ್ಷನ್ ಎಷ್ಟು? ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರಲ್ಲೂ ಇದೆ.
ಬಾಕ್ಸ್ ಆಫೀಸ್ ಗಳಿಕೆ ಟ್ರಾಕ್ ಮಾಡುವ ಸಕಿನಿಕ್ ಡಾಟ್‍ಕಾಮ್ ಪ್ರಕಾರ, ‘ಮಾರ್ಟಿನ್’ ಚಿತ್ರವು ಮೊದಲ ಮೂರು ದಿನಗಳಲ್ಲಿ ಗಳಿಕೆ ಮಾಡಿರುವ ಮೊತ್ತ ಕೇವಲ 15.50 ಕೋಟಿ ರೂ. ಮಾತ್ರ. ಈ ಪೈಕಿ ಮೊದಲ ದಿನ ಚಿತ್ರವು 6.7 ಕೋಟಿ ರೂ. ಗಳಿಕೆ ಮಾಡಿದರೆ, ಎರಡನೇ ದಿನ 5.5 ಕೋಟಿ ರೂ. ಸಂಗ್ರಹ ಮಾಡಿದೆ. ಮೂರನೆಯ ದಿನ 3.35 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ ಮೂರು ದಿನಗಳಲ್ಲಿ ಚಿತ್ರವು ಇಡೀ ದೇಶಾದ್ಯಂತ ಗಳಿಕೆ ಮಾಡಿರುವ ಮೊತ್ತ ಕೇವಲ 15.5 ಕೋಟಿ ರೂ. ಮಾತ್ರ.
ಹೀಗಿರುವಾಗಲೇ, ಚಿತ್ರತಂಡದವರು ಸೋಮವಾರ ಸಂಜೆ ಪತ್ರಿಕಾಗೋಷ್ಠಿ ಮಾಡಿ, ಚಿತ್ರವು ಯಶಸ್ವಿಯಾಗಿದೆ ಎಂದು ಸಂಭ್ರಮ ಹಂಚಿಕೊಂಡಿದೆ. ಈ ಸಂದರ್ಭದಲ್ಲಿ ಚಿತ್ರ ಎಷ್ಟು ಗಳಿಕೆ ಮಾಡಿದೆ ಎಂಬ ಪ್ರಶ್ನೆಗೆ ಉತ್ತರಿಸುವುದಕ್ಕೆ ನಿರ್ಮಾಪಕ ಉದಯ್ ಮೆಹ್ತಾ ಇರಲಿಲ್ಲ. ಅವರ ಬದಲು ಮಾತನಾಡಿದ ಅವರ ಮಗ ಸೂರಜ್ ಮೆಹ್ತಾ, ‘ಈ ವರ್ಷ ಬಿಡುಗಡೆಯಾದ ಎಲ್ಲ ಚಿತ್ರಗಳಲ್ಲೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ. ಕಲೆಕ್ಷನ್ ಚೆನ್ನಾಗಿದೆ. ಎಷ್ಟಾಗಿದೆ ಎಂಬುದು ವಾರದ ಕೊನೆಗೆ ಗೊತ್ತಾಗುತ್ತದೆ’ ಎಂದು ಹೇಳಿದರು.
ಇನ್ನು, ಈ ಕುರಿತು ಮಾತನಾಡಿರುವ ಧ್ರುವ ಸರ್ಜಾ, ‘ಚಿತ್ರದ ಕಲೆಕ್ಷನ್ ಈಗಲೇ ಗೊತ್ತಾಗುವುದಿಲ್ಲ. ಸದ್ಯ ಎರಡು ದಿನಗಳ ಕೆಲಕ್ಷನ್ ಅಷ್ಟೇ ಗೊತ್ತಾಗಿದೆ’ ಎಂದು ಹೇಳಿದ್ದಾರೆ. ಈ ಮೂಲಕ ಚಿತ್ರತಂಡದವರು ಚಿತ್ರದ ಕಲೆಕ್ಷನ್ ಹೇಳದೆ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ.
‘ಮಾರ್ಟಿನ್’ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಸರ್ಜಾ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದು, ಎ.ಪಿ. ಅರ್ಜುನ್ ನಿರ್ದೇಶನ ಮಾಡಿದ್ದಾರೆ. ರವಿ ಬಸ್ರೂರು ಹಿನ್ನೆಲೆ ಸಂಗೀತ, ಮಣಿಶರ್ಮ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…