ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ ‘ಹನುಮಂತಪ್ಪನ ಎರಡು ಎಕರೆ ಜಾಗ’ ಎಂಬ ಚಿತ್ರ ನಿರ್ದೇಶಿಸಿದ್ದ ವಿಶ್ವನಾಥ, ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ‘ಅಪರಿಚಿತೆ’ ಕುರಿತು ಮಾತನಾಡುವ ಅವರು, ‘ಇದು ನೈಜ ಕಥೆ ಆಧಾರಿತ ಸಿನಿಮಾ. ಸಿಂಧೂ ಲೋಕನಾಥ್, ಆರ್.ಜೆ.ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು, ಆದಷ್ಟು ಬೇಗ ಚಿತ್ರೀಕರಣ ಮಾಡಿ, ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ’ ಎಂದರು.
ಹಿರಿಯ ನಟ ಶ್ರೀನಾಥ್ ಮಾತನಾಡಿ, ‘ಕೊರೋನಾ ನಂತರ ನಾನು ನಟಿಸುತ್ತಿರುವ ಮೊದಲ ಸಿನಿಮಾ ಇದು. ಸಮಾಜಕ್ಕೆ ಒಂದು ಉತ್ತಮ ಸಂದೇಶ ಕೊಡಲು ಈ ಸಿನಿಮಾ ಮಾಡುತ್ತಿರುವುದು ಖುಷಿ ಆಯ್ತು. ಅದರಲ್ಲೂ ಮುಖ್ಯವಾಗಿ 40 ವರ್ಷದ ನಂತರ ನಾನು, ನನ್ನ ಮಗ ಒಂದೇ ಚಿತ್ರದಲ್ಲಿ ನಟಿಸುತ್ತಿರುವುದು ಹೆಚ್ಚಿನ ಖುಷಿ ಆಗುತ್ತಿದೆ’ ಎಂದರು.
ಶ್ರೀನಾಥ್ ಅವರ ಮಗ ರೋಹಿತ್ ಮಾತನಾಡಿ, ‘ನಾನು 35 ವರ್ಷ ಆದಮೇಲೆ ಸಿನಿಮಾದಲ್ಲಿ ನಟನೆ ಮಾಡತಾ ಇದ್ದೇನೆ. ಅದರಲ್ಲೂ ಅಪ್ಪನ ಜೊತೆ ನಟಿಸೋದು ಖುಷಿ ಇದೆ. ಪಾತ್ರ ಕೂಡ ತುಂಬಾ ಚನ್ನಾಗಿದೆ’ ಎಂದು ಹೇಳಿದರು.
‘ಅಪರಿಚಿತೆ’ ಚಿತ್ರವನ್ನು ಗೀತಪ್ರಿಯಾ ಅವರ ಪತಿ ಸುರೇಶ್ ನಾಗಪಲ್, ಅಮರ ಫಿಲಂಸ್ ಬ್ಯಾನರ್ ಅಡಿ ನಿರ್ಮಿಸುತ್ತಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…