ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ ಸಹ ಸೇರಿದೆ. ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿರುವ ಶಶಿ, ತಮ್ಮ ಮಗನನ್ನು ಹೀರೋ ಮಾಡುವುದಕ್ಕೆ ‘ರಿಕ್ಷಾಚಾಲಕ’ ಎಂಬ ಚಿತ್ರ ಮಾಡಿದ್ದಾರೆ. ಇದಕ್ಕೆ ಅವರ ಪತ್ನಿಯೇ ನಿರ್ಮಾಪಕಿ, ಮತ್ತೊಬ್ಬ ಮಗನೇ ಹೀರೋ.
‘ರಿಕ್ಷಾಚಾಲಕ’ ಎಂಬ ಹೆಸರೇ ಹೇಳುವಂತೆ ಇದೊಬ್ಬ ಆಟೋ ಡ್ರೈವರ್‍ನ ಕಥೆ ಇರುವ ಚಿತ್ರ. ಈ ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಶಶಿ ಅವರ ಮಗ ಚಿರಂತ್ ಈ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ. ಅವರ ಸಹೋದರ ಆಯುಷ್ ಶಶಿಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಚಿರಂತ್, ‘ಲಾಕ್‌ಡೌನ್ ಸಂದರ್ಭದಲ್ಲಿ ಆಟೋ ಡ್ರೈವರ್‌ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನು ಈ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದಾರೆ. ಒಬ್ಬ ಒಳ್ಳೆಯ ಆಟೋ ಚಾಲಕ ಸಮಾಜದಲ್ಲಿ ಏನೆಲ್ಲಾ ಕಷ್ಟ ಎದುರಿಸುತ್ತಾನೆ ಎಂದು ಈ ಸಿನಿಮಾದಲ್ಲಿ ತೋರಿಸಿದ್ದೇವೆ. ನಮ್ಮ ತಂದೆಯವರು ಡ್ಯಾನ್ಸ್ ಮಾಸ್ಟರ್ ಆಗಿದ್ದು, ಅವರನ್ನೇ ನೋಡಿಯೇ ನಾನು ಡ್ಯಾನ್ಸ್ ಕಲಿತಿದ್ದೇನೆ. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸಿದ್ದೇವೆ’ ಎಂದರು.
ನಿರ್ದೇಶಕ ಆಯುಷ್ ಶಶಿಕುಮಾರ್ ಮಾತನಾಡಿ, ‘ಚಿಕ್ಕ ವಯಸ್ಸಿನಿಂದ ತಂದೆಯವರು ನನ್ನನ್ನು ಶೂಟಿಂಗ್ ಇದ್ದಾಗ ಕರೆದುಕೊಂಡು ಹೋಗುತ್ತಿದ್ದರು. ಹಾಗೇ ಸಿನಿಮಾದ ಮೇಲಿನ ಆಸಕ್ತಿ ಬೆಳೆಯುತ್ತಾ ಬಂತು. ಇದೊಂದು ಆಕ್ಷನ್ ಫ್ಯಾಮಿಲಿ ಡ್ರಾಮಾ ಚಿತ್ರ’ ಎಂದರು.
‘ರಿಕ್ಷಾ ಚಾಲಕ’ ಸಿನಿಮಾದಲ್ಲಿ ಐದು ಹಾಡುಗಳಿದ್ದು, ವೇದಾಂತ್ ಅತಿಶಯ್ ಜೈನ್ ಅವರ ಸಂಗೀತವಿದೆ. ಚಿತ್ರಕ್ಕೆ ಆನಂದ್ ಛಾಯಾಗ್ರಹಣ ಮಾಡಿದ್ದು, ಈ ಚಿತ್ರದಲ್ಲಿ ಚಿರಂತ್, ನಂದಿನಿ, ದರ್ಶನ್, ಬಲ ರಾಜವಾಡಿ, ಚಂದ್ರಪ್ರಭ, ಮಿಮಿಕ್ರಿ ಗೋಪಿ ಮುಂತಾದವರು ನಟಿಸಿದ್ದಾರೆ. ಮೈಸೂರು, ವರುಣಾ, ಕೆ.ಆರ್.ನಗರ, ಸಾಲಿಗ್ರಾಮ ಹಾಗೂ ಮುರುಡೇಶ್ವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…