ಮನರಂಜನೆ

‘ವಾಮನ’ನ ತಾಯಿ ಸೆಂಟಿಮೆಂಟ್

ಧನ್ವೀರ್ ಗೌಡ ಅಭಿನಯದ ‘ವಾಮನ’ ಚಿತ್ರ ಒಂದೂವರೆ ವರ್ಷಗಳ ಹಿಂದೆ ಬಿಡುಗಡೆಯಾಗಬೇಕಿತ್ತು. ನಟ ಧನ್ವೀರ್ ಮತ್ತು ನಿರ್ಮಾಪಕಚೇತನ್ ಗೌಡ ನಡುವಿನ ಮುನಿಸಿನಿಂದಾಗಿ ಚಿತ್ರದ ಬಿಡುಗಡೆ ರದ್ದಾಗುವುದಷ್ಟೇ ಅಲ್ಲ, ಇನ್ನು ಬಿಡುಗಡೆಯೇ ಆಗುವುದಿಲ್ಲ ಎಂಬ ಮಾತು ಕೇಳಿಬಂದಿತ್ತು. ಹೀಗಿರುವಾಗಲೇ, ಏಪ್ರಿಲ್ ೧೦ರಂದು ‘ವಾಮನ’ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ತಾಯಿ ಸೆಂಟಿಮೆಂಟ್ ಹಾಡೊಂದು ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ನಿರ್ಮಾಪಕರು ಮತ್ತು ನಾಯಕ ಜೊತೆಯಾಗಿ ಕಾಣಿಸಿಕೊಳ್ಳಲಿಲ್ಲ. ತಮ್ಮ ಭಾಷಣಗಳಲ್ಲಿ ಇನ್ನೊಬ್ಬರ ಹೆಸರನ್ನು ತೆಗೆಯಲಿಲ್ಲ. ಒಂದೂವರೆ ವರ್ಷದ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಚಿತ್ರವು, ಇಷ್ಟು ತಡವಾಗುತ್ತಿರುವುದೇಕೆ ಎಂಬ ಪ್ರಶ್ನೆಗೆ, ‘ನಾವು ಬಿಡುಗಡೆ ದಿನಾಂಕ ಘೋಷಣೆ ಮಾಡಿರಲಿಲ್ಲ.

ವ್ಯಾಪಾರದ ವಿಷಯವಾಗಿ ಚಿತ್ರ ಸ್ವಲ್ಪ ತಡವಾಯಿತು’ ಎಂದಷ್ಟೇ ಹೇಳಿದರು ನಿರ್ಮಾಪಕ ಚೇತನ್ ಗೌಡ. ‘ವಾಮನ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ ‘ಕಂದನ ಕನಸ ರೂಪ…’ ಎಂಬ ತಾಯಿ – ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ದರ್ಶನ್ ಪತಿ ವಿಜಯಲಕ್ಷ್ಮಿ ದರ್ಶನ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ‘ಕಾಂತಾರ’ ಖ್ಯಾತಿಯ ವೆಂಕಟೇಶ್ ಡಿ.ಸಿ. ಈ ಹಾಡನ್ನು ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರುವ ಈ ಹಾಡು ಅ೨ ಞ್ಠoಜ್ಚಿ ಚಾನಲ್‌ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ವಿಶ್ವದ ಎಲ್ಲಾ ತಾಯಂದಿರಿಗೆ ಅರ್ಪಿಸುತ್ತೇನೆ ಎಂದು ಮಾತನಾಡಿದ, ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಶಂಕರ್ ರಾಮನ್, ‘ನನಗೆ ‘ಕೈ ತುತ್ತು ಕೊಟ್ಟವಳೆ ಐ ಲವ್ ಯೂ ಮದರ್ ಇಂಡಿಯಾ…’ ಹಾಗೂ ‘ಬೇಡುವೆನು ವರವನ್ನು ಕೊಡೆ ತಾಯಿ ಜನುಮವನು…’ ಹಾಡುಗಳು ತುಂಬಾ ಇಷ್ಟ. ಅದೇ ತರಹದ ಹಾಡು ನಮ್ಮ ಚಿತ್ರಕ್ಕೆ ಬೇಕು ಎಂದು ಕೇಳಿದಾಗ ಪ್ರಮೋದ್ ಮರವಂತೆ ಈ ಹಾಡನ್ನು ಬರೆದು ಕೊಟ್ಟಿದ್ದಾರೆ. ತಾಯಿ ತನ್ನ ಬವಣೆಗಳನ್ನು ಮಗನ ಮುಂದೆ ಹೇಳಿಕೊಳ್ಳುವ ಹಾಡು ಇದು’ ಎಂದರು. ‘ವಾಮನ’ ಚಿತ್ರದಲ್ಲಿ ಧನ್ವೀರ್, ರೀಷ್ಮಾ ನಾಣಯ್ಯ, ತಾರಾ, ಸಂಪತ್, ಆದಿತ್ಯ ಮೆನನ್, ಶಿವರಾಜ್ ಕೆ.ಆರ್.ಪೇಟೆ, ಅವಿನಾಶ್, ಅಚ್ಯುತ್ ಕುಮಾರ್, ಕಾಕ್ರೊಚ್ ಸುಧಿ ಮುಂತಾದವರು ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

5 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

10 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

14 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

14 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

14 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

17 hours ago