ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ ಬರಲಿದೆ ಎಂದು ಶಿವರಾಜಕುಮಾರ್ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಸಂತೋಷ ಕೂಟದಲ್ಲಿ ಮಾತನಾಡಿರುವ ಶಿವರಾಜಕುಮಾರ್, ʼʼಮಫ್ತಿʼ ಚಿತ್ರದ ನನ್ನ ಭೈರತಿ ರಣಗಲ್ ಪಾತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು ಎಂದು ಮಾತು ಶುರು ಮಾಡಿದ ಶಿವಣ್ಣ, ʼʼಭೈರತಿ ರಣಗಲ್ʼ ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ʼಮಫ್ತಿ ೨ʼ ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತಾ ಮಾಡುತ್ತೇನೆ. ಆದರೆ, ಶೀರ್ಷಿಕೆ ʼಮಫ್ತಿ ೨ʼ ಎಂದಿರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆʼ ಎಂದರು.
ಇನ್ನು, ಚಿತ್ರದ ಕಲೆಕ್ಷನ್ ಎಷ್ಟಾಗಿದೆ ಎಂಬ ವಿಷಯವನ್ನು ಚಿತ್ರತಂಡದವರಾಗಲೀ, ಚಿತ್ರವನ್ನು ವಿತರಣೆ ಮಾಡಿರುವ ಜಗದೀಶ್ ಫಿಲಂಸ್ನವರಾಗಲೀ ಘೋಷಣೆ ಮಾಡಿಲ್ಲ. ಆದರೆ, ವಿತರಕರ ಮುಖದಲ್ಲಿ ಸಂತೋಷ ಕಂಡೆ ಸಿನಿಮಾ ಗೆದ್ದ ಹಾಗೆ ಎಂದಿರುವ ವಿತರಕ ಜಗದೀಶ್, ʼಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ. ಅದಕ್ಕೆ ಈ ಚಿತ್ರವೇ ಉದಾಹರಣೆ. ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ. ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆʼ ಎಂದರು.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…