‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.
ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್ ಲೋಕನಾಥ್ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.
‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.
‘ಜಸ್ಟ್ ಮ್ಯಾರೀಡ್’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…