ಮನರಂಜನೆ

‘ಜಸ್ಟ್ ಮ್ಯಾರೀಡ್‍’ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್

‘ಜಸ್ಟ್ ಮ್ಯಾರೀಡ್‍’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್‍.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ.

ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್‍ ಲೋಕನಾಥ್‍ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್‍’ ಚಿತ್ರವು ಕಳೆದ ವರ್ಷ ಸದ್ದಿಲ್ಲದೆ ಪ್ರಾರಂಭವಾಗಿತ್ತು. ಇದೀಗ ಚಿತ್ರವು ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅನೇಕ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿರುವ ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.

‘ಬಿಗ್‍ ಬಾಸ್‍’ ಖ್ಯಾತಿಯ ಶೈನ್‍ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್‍’ ಚಿತ್ರಕ್ಕೆ ಬಾಬಿ ಅವರೇ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.

‘ಜಸ್ಟ್ ಮ್ಯಾರೀಡ್‍’ ಚಿತ್ರದಲ್ಲಿ ಪ್ರತಿಭಾವಂತ ನಟ-ನಟಿಯರ ದಂಡೇ ಇದ್ದು, ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಮಿಕ್ಕಂತೆ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.

ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago