ಮನರಂಜನೆ

ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್‌ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ರೆಹಮಾನ್‌ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್‌ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಚಿಂತೆಪಡುವ ಅವಶ್ಯಕತೆಯಿಲ್ಲ, ಅವರು ಆರಾಮಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ರೆಹಮಾನ್‌ ಅವರ ಪುತ್ರ ಎ.ಆರ್‌.ಅಮೀನ್‌ ತಮ್ಮ ತಂದೆಯ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳೇ ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು. ನಿರ್ಜಲೀಕರಣದಿಂದ ತಮ್ಮ ತಂದೆ ಸ್ವಲ್ಪ ನಿಶ್ಯಕ್ತಿ ಹೊಂದಿದ್ದರು. ಆದ್ದರಿಂದ ನಾವು ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿಸಲಾಯಿತು. ಆ ಪರೀಕ್ಷೆಯ ನಂತರ ಅವರು ಗುಣಮುಖವಾಗಿದ್ದಾರೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

1 hour ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

1 hour ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

1 hour ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago