ಮನರಂಜನೆ

ಅಪ್ಪಾಜಿಗೂ ರಾಜಕೀಯದ ಮೇಲೆ ಆಸಕ್ತಿಯಿತ್ತು: ಶಿವಣ್ಣ ಅಚ್ಚರಿ ಹೇಳಿಕೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ ತಮ್ಮ ಹೆಂಡತಿ ಪರ ಪ್ರಚಾರ ಮಾಡುತ್ತಿರುವ ಶಿವಣ್ಣ, ದೊಡ್ಮನೆ ರಾಜಕೀಯಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಅಪ್ಪಾಜಿಗೆ ರಾಜಕೀಯ ಆಗುತ್ತಿರಲಿಲ್ಲ ಅಂತ ಕೆಲವರು ಹೇಳ್ತಾರೆ. ಹಾಗೇನೂ ಇಲ್ಲ. ಯಾವುದೇ ಸಮಾರಂಭ ಆಗಲಿ, ಯಾವುದೇ ಮುಖ್ಯಮಂತ್ರಿ ಆಗಲಿ, ಮೊದಲು ದೊಡ್ಮನೆಗೆ ಬಂದು ಅಪ್ಪಾಜಿ ಜೊತೆ ಮಾತಾಡುತ್ತಿದ್ದರು. ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ರಾಜಕೀಯದ ವ್ಯಕ್ತಿಗಳು ಬೇಕು. ಇಲ್ಲಾಂದ್ರೆ ನನಗೆ ಯಾಕೆ ಬಂಗಾರಪ್ಪನ ಮಗಳು ತರಬೇಕು ಹೇಳಿ? ಅವರು ರಾಜಕೀಯವನ್ನು ಯಾವಾಗಲೂ ತಪ್ಪು ಅಂತ ಹೇಳಿಲ್ಲ ಎಂದು ಶಿವಣ್ಣ ಹೇಳಿದ್ದಾರೆ.

ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಆಗುತ್ತಿರಲಿಲ್ಲ ಅಷ್ಟೇ. ತಮ್ಮ ಕೆಲಸ ನಟನೆ ಅಂತ ಹೇಳಿದ್ದರು. ಅಪ್ಪಾಜಿ ನನಗೆ ಕೊಟ್ಟ ಬಳುವಳಿಯೇ ಸಿನಿಮಾ. ಹಾಗಾಗಿ ನಾನು ರಾಜಕೀಯ ರಂಗಕ್ಕೆ ಹೋಗಲಿಲ್ಲ. ಆದರೆ ಗೀತಾಗೆ ಹಾಗಲ್ಲ. ಅವರ ತಂದೆಯ ರಕ್ತನೂ ಇದೆ. ಅದೊಂದು ಜವಾಬ್ದಾರಿ ಅವರಿಗೆ ಇದೆ. ಬರೀ ಗಂಡಸರಿಗೆ ಮಾತ್ರ ಜವಾಬ್ದಾರಿ ಇರಬೇಕಾ? ಹೆಣ್ಮಕ್ಕಳಿಗೆ ಇರಬಾರದಾ? ಕರ್ನಾಟಕದ ಮಹಿಳೆಯರು ರಾಜಕೀಯದಲ್ಲಿ ಕಡಿಮೆ ಜನ ಇದ್ದಾರೆ. ಈಗ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಚಿತ್ರರಂಗದಲ್ಲಿ ಎಲ್ಲರೂ ಸೇರಿ ಕುಟುಂಬ ಆಗುತ್ತದೆ. ಆ ಇಡೀ ಕುಟುಂಬ ಇವತ್ತು ಗೀತಾ ಪರವಾಗಿ ನಿಂತಿದ್ದಕ್ಕೆ ನಮಗೆ ಹೆಮ್ಮೆ ಆಗುತ್ತದೆ. ಇದಕ್ಕೆ ನಾವು ಧನ್ಯ’ ಎಂದು ಶಿವರಾಜ್​ಕುಮಾರ್ ಅಭಿನಂದನೆ ಸಲ್ಲಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

19 seconds ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

23 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

42 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

50 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

1 hour ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

2 hours ago