ಮನರಂಜನೆ

ಹೊಸ ಚಿತ್ರದೊಂದಿಗೆ ಹೀರೋ ಮತ್ತು ಸಂಗೀತ ನಿರ್ದೇಶಕರಾದ ನಾಗಶೇಖರ್

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ ಚಿತ್ರಗಳು ಪ್ರಾರಂಭವಾಗಲಿಲ್ಲ. ಬದಲಿಗೆ, ನಾಗಶೇಖರ್‍ ಸದ್ಯಕ್ಕೆ ನಿರ್ದೇಶನವನ್ನು ಪಕ್ಕಕ್ಕಿಟ್ಟು, ಇದೀಗ ಹೀರೋ ಆಗಿದ್ದಾರೆ.

ಹೌದು, ನಾಗಶೇಖರ್‍ ಬಹಳ ವರ್ಷಗಳ ನಂತರ ಒಂದು ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಗೌರಿಪುತ್ರ’ ಎಂಬ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ನಿರ್ದೇಶನದಲ್ಲೇ ಹೆಚ್ಚಾಗಿ ತೊಡಗಿಸಿಕೊಂಡಿದ್ದ ನಾಗಶೇಖರ್‍, ಬಹಳ ದಿನಗಳ ನಂತರ ತೆರೆಮೇಲೆ ಬರುತ್ತಿದ್ದಾರೆ.

ನಾಗಶೇಖರ್‍ ಹೀರೋ ಆಗಿ ನಟಿಸುತ್ತಿರುವ ಚಿತ್ರದ ಹೆಸರೇ ವಿಭಿನ್ನವಾಗಿದೆ. ಚಿತ್ರದ ಹೆಸರು ‘ವಾರ್ತೆಗಳು – ಓದುತ್ತಿರುವವರು ಶಂಕರ್‍ ನಾಗ್‍’. ಶೀರ್ಷಿಕೆಯ ಮೂಲಕವೇ ಹೊಸ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ಜಿಯಾ ಉಲ್ಲಾ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ನವೆಂಬರ್ ೧೧ರಂದು ನಾಗಶೇಖರ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ದಿನ ‘ವಾರ್ತೆಗಳು ಓದುತ್ತಿರುವವರು ಶಂಕರ್‌ನಾಗ್’ ಚಿತ್ರದ ಮುಹೂರ್ತ ನೆರವೇರಿದೆ. ರಾಜರಾಜೇಶ್ವರಿ ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ನಾಗಶೇಖರ್ ಅವರ ತಾಯಿ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು.

‘ವಾರ್ತೆಗಳು – ಓದುತ್ತಿರುವವರು ಶಂಕರ್‍ ನಾಗ್‍’ ಚಿತ್ರವನ್ನು ಎ ರಾಮ್ ಚಿರು ಪ್ರೊಡಕ್ಷನ್ ಹೌಸ್ ಮೂಲಕ ರಾಮ್ ಚಿರು ನಿರ್ಮಿಸುತ್ತಿದ್ದಾರೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗುತ್ತಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ ನಾಗಶೇಖರ್ ಅವರೂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದು ಜತೆಗೆ ಸಂಗೀತ ನಿರ್ದೇಶಕನಾಗಿಯೂ ಕೆಲಸ ಮಾಡುತ್ತಿದ್ದಾರೆ. ಉಳಿದ ಕಲಾವಿದರು ಮತ್ತು ತಾಂತ್ರಿಕ ವರ್ಗದವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

1 hour ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

1 hour ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

2 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

3 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

3 hours ago