nagathihalli chandrasheka
ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್ ಅರವಿಂದ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ ಚಿತ್ರಗಳು ತನ್ನದೇ ಕಾರಣಗಳಿಗೆ ಬಹಳ ಪ್ರಾಮುಖ್ಯತೆ ಪಡೆದಿವೆ. ಈ ಜೋಡಿ ಮೊದಲಿಗೆ ಜೊತೆಯಾಗಿ ಕೆಲಸ ಮಾಡಿದ್ದು ‘ಅಮೇರಿಕಾ ಅಮೇರಿಕಾ’ ಚಿತ್ರದಲ್ಲಿ. ಆ ನಂತರ ‘ಹೂಮಳೆ’ ಚಿತ್ರದಲ್ಲೂ ಈ ಜೋಡಿ ಜೊತೆಗೆ ಕೆಲಸ ಮಾಡಿತ್ತು.
ಈಗ್ಯಾಕೆ ಈ ಜೋಡಿಯ ಕಥೆ ಎಂದರೆ, ಬಹಳ ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ನಿರೂಪ್ ಭಂಡಾರಿ, ಪೃಥ್ವಿ ಅಂಬರ್ ಮತ್ತು ಶಾನ್ವಿ ಶ್ರೀವಾತ್ಸವ್ ಅಭಿನಯದಲ್ಲಿ ನಾಗತಿಹಳ್ಳಿ ಒಂದು ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರಕ್ಕೆ ‘ಅಮೇರಿಕಾ ಅಮೇರಿಕಾ 2’ ಎಂಬ ಹೆಸರಿಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ರಮೇಶ್ ಅರವಿಂದ್ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
1997ರಲ್ಲಿ ಬಿಡುಗಡೆಯಾದ ‘ಅಮೇರಿಕಾ ಅಮೇರಿಕಾ’ ಚಿತ್ರವು ಅಮೇರಿಕಾದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಈ ಚಿತ್ರದ ಮೂಲಕ ಮನೋಮೂರ್ತಿ ಸಂಗೀತ ನಿರ್ದೇಶಕರಾಗಿದ್ದರು. ಅನಿವಾಸಿ ಭಾರತೀಯರ ನೋವು-ನಲಿವನ್ನು ಈ ಚಿತ್ರ ಅದ್ಭುತವಾಗಿ ಹಿಡಿದಿಟ್ಟಿತ್ತು. ‘ಅಮೇರಿಕಾ ಅಮೇರಿಕಾ 2’ಗೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅಮೇರಿಕಾದಲ್ಲಿ ನೆಲೆಸಿರುವ ಇವತ್ತಿನ ತಲೆಮಾರಿನವರ ಕುರಿತಾದ ಚಿತ್ರ ಇದಾಗಿದೆ. ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯನ್ನು ಈ ಚಿತ್ರ ಆಧರಿಸಿದೆ. ಈ ಚಿತ್ರದಲ್ಲಿ ರಮೇಶ್ ಅವರ ಪಾತ್ರವೇನು ಎಂಬ ವಿಷಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಚಿತ್ರದ ನಿರೂಪಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಲಾಗಿದೆ.
ಈ ಚಿತ್ರವನ್ನು ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಮನೋಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲವೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…