ಮನರಂಜನೆ

25 ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಮೇಶ್ ಅರವಿಂದ್‍

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್‍, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ ಚಿತ್ರಗಳು ತನ್ನದೇ ಕಾರಣಗಳಿಗೆ ಬಹಳ ಪ್ರಾಮುಖ್ಯತೆ ಪಡೆದಿವೆ. ಈ ಜೋಡಿ ಮೊದಲಿಗೆ ಜೊತೆಯಾಗಿ ಕೆಲಸ ಮಾಡಿದ್ದು ‘ಅಮೇರಿಕಾ ಅಮೇರಿಕಾ’ ಚಿತ್ರದಲ್ಲಿ. ಆ ನಂತರ ‘ಹೂಮಳೆ’ ಚಿತ್ರದಲ್ಲೂ ಈ ಜೋಡಿ ಜೊತೆಗೆ ಕೆಲಸ ಮಾಡಿತ್ತು.

ಈಗ್ಯಾಕೆ ಈ ಜೋಡಿಯ ಕಥೆ ಎಂದರೆ, ಬಹಳ ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಸಿನಿಮಾದಲ್ಲಿ ರಮೇಶ್ ಅರವಿಂದ್ ನಟಿಸಿದ್ದಾರೆ. ನಿರೂಪ್‍ ಭಂಡಾರಿ, ಪೃಥ್ವಿ ಅಂಬರ್ ಮತ್ತು ಶಾನ್ವಿ ಶ್ರೀವಾತ್ಸವ್‍ ಅಭಿನಯದಲ್ಲಿ ನಾಗತಿಹಳ್ಳಿ ಒಂದು ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರಕ್ಕೆ ‘ಅಮೇರಿಕಾ ಅಮೇರಿಕಾ 2’ ಎಂಬ ಹೆಸರಿಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ರಮೇಶ್‍ ಅರವಿಂದ್‍ ಒಂದು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

1997ರಲ್ಲಿ ಬಿಡುಗಡೆಯಾದ ‘ಅಮೇರಿಕಾ ಅಮೇರಿಕಾ’ ಚಿತ್ರವು ಅಮೇರಿಕಾದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಈ ಚಿತ್ರದ ಮೂಲಕ ಮನೋಮೂರ್ತಿ ಸಂಗೀತ ನಿರ್ದೇಶಕರಾಗಿದ್ದರು. ಅನಿವಾಸಿ ಭಾರತೀಯರ ನೋವು-ನಲಿವನ್ನು ಈ ಚಿತ್ರ ಅದ್ಭುತವಾಗಿ ಹಿಡಿದಿಟ್ಟಿತ್ತು. ‘ಅಮೇರಿಕಾ ಅಮೇರಿಕಾ 2’ಗೂ ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅಮೇರಿಕಾದಲ್ಲಿ ನೆಲೆಸಿರುವ ಇವತ್ತಿನ ತಲೆಮಾರಿನವರ ಕುರಿತಾದ ಚಿತ್ರ ಇದಾಗಿದೆ. ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯನ್ನು ಈ ಚಿತ್ರ ಆಧರಿಸಿದೆ. ಈ ಚಿತ್ರದಲ್ಲಿ ರಮೇಶ್‍ ಅವರ ಪಾತ್ರವೇನು ಎಂಬ ವಿಷಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಆದರೆ, ಚಿತ್ರದ ನಿರೂಪಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಲಾಗಿದೆ.

ಈ ಚಿತ್ರವನ್ನು ಅಭುವನಸ ಕ್ರಿಯೇಷನ್ಸ್ ಬ್ಯಾನರ್ ಅಡಿ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಮನೋಮೂರ್ತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಕೆಲವೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

15 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago