ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.
ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಸಹ ದೊರೆತಿದೆ. ಈ ಮೂಲಕ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.
2022ರ ದಸರಾ ಸಂಭ್ರಮದಲ್ಲಿ ಕಾಂತಾರ ಸಿನಿಮಾ ತೆರೆ ಕಂಡಿತ್ತು. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿತ್ತು. ಮೊದಲಿಗ ಕನ್ನಡ ಚಿತ್ರವಾಗಿಯೇ ತೆರೆ ಕಂಡಿದ್ದ ಕಾಂತಾರ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ನಾಲ್ಕು ಭಾಷೆಗಳಿಗೆ ಡಬ್ ಆಗಿ ಹಿಟ್ ಆಗಿತ್ತು. ರಿಷಬ್ ಶೆಟ್ಟಿ ನಟನೆ ಕಂಡು ಪರಭಾಷಿಕರು ಬಹುಪರಕ್ ಎಂದಿದ್ದರು.
ಇನ್ನು ಅದೇ ವರ್ಷ ಅಂದರೆ 2022ರಲ್ಲೇ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2ಸಿನಿಮಾ ಬಿಡುಗಡೆಯಾಗಿತ್ತು. ಇದು ಐಎಂಡಿಬಿಯಲ್ಲಿಯೂ 8.5 ರೇಟಿಂಗ್ ಪಡೆದುಕೊಂಡಿತ್ತು.
ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಲ್ಲಿ ಸಮಾರಂಭದಲ್ಲಿ ಗೌರವಿಸುತ್ತಾರೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದಾಗಿದೆ.
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…
ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…
ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…