ಮನರಂಜನೆ

National Awards: ಕಾಂತಾರ ಸ್ಟಾರ್‌ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ; KGF-2ಅತ್ಯುತ್ತಮ ಕನ್ನಡ ಚಿತ್ರ

ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

ಇನ್ನು ಕೆಜಿಎಫ್ 2 ಚಲನಚಿತ್ರ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಸಹ ದೊರೆತಿದೆ. ಈ ಮೂಲಕ ಕನ್ನಡ ಚಿತ್ರರಂಗ ಈ ಬಾರಿ ರಾಷ್ಟ್ರ ಮಟ್ಟದಲ್ಲಿ ಪಾರಮ್ಯ ಮೆರೆದಿದೆ.

2022ರ ದಸರಾ ಸಂಭ್ರಮದಲ್ಲಿ ಕಾಂತಾರ ಸಿನಿಮಾ ತೆರೆ ಕಂಡಿತ್ತು. ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆ ಚಿತ್ರವನ್ನು ನಿರ್ಮಾಣ ಮಾಡಿತ್ತು. ಮೊದಲಿಗ ಕನ್ನಡ ಚಿತ್ರವಾಗಿಯೇ ತೆರೆ ಕಂಡಿದ್ದ ಕಾಂತಾರ ಬಳಿಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿ, ನಾಲ್ಕು ಭಾಷೆಗಳಿಗೆ ಡಬ್‌ ಆಗಿ ಹಿಟ್‌ ಆಗಿತ್ತು. ರಿಷಬ್‌ ಶೆಟ್ಟಿ ನಟನೆ ಕಂಡು ಪರಭಾಷಿಕರು ಬಹುಪರಕ್‌ ಎಂದಿದ್ದರು.

ಇನ್ನು ಅದೇ ವರ್ಷ ಅಂದರೆ 2022ರಲ್ಲೇ ರಾಕಿಂಗ್‌ ಸ್ಟಾರ್‌ ಯಶ್ ನಟನೆಯ ಕೆಜಿಎಫ್‌ ಚಾಪ್ಟರ್-‌2ಸಿನಿಮಾ ಬಿಡುಗಡೆಯಾಗಿತ್ತು. ಇದು ಐಎಂಡಿಬಿಯಲ್ಲಿಯೂ 8.5 ರೇಟಿಂಗ್‌ ಪಡೆದುಕೊಂಡಿತ್ತು.

ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಲ್ಲಿ ಸಮಾರಂಭದಲ್ಲಿ ಗೌರವಿಸುತ್ತಾರೆ.
ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

32 mins ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

1 hour ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

1 hour ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

1 hour ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

1 hour ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

1 hour ago