ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಕನ್ನಡ ಚಿತ್ರರಂಗದ ನಟ, ನಟಿಯರು ಸೋಶಿಯಲ್ ಮೀಡಿಯಾ ಮೂಲಕ ತೀವ್ರವಾಗಿ ಖಂಡಿಸಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಹಿಸಬೇಕು. ಹಾಗೂ ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಜೈ ಆಂಜನೇಯ ಎಂದು ನಟ ಧ್ರುವ ಸರ್ಜಾ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ, ನೇಹಾ ಹಿರೇಮಠ ಅವರ ಕೊಲೆ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ರಚಿತರಾಮ್ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ, ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮ್ಯಾನ್ಯರ ಕೈಗೆ ಒಪ್ಪಿಸಿ ಎಂದು ಪೋಸ್ಟ್ ಮಾಡಿದ್ದಾರೆ.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…