Categories: ಮನರಂಜನೆ

Nenapirali Prem; ನಿರಂಜನ್‌ ಸುಧೀಂದ್ರ ಜೊತೆಗೆ ‘ನೆನಪಿರಲಿ’ ಪ್ರೇಮ್; ʼಸ್ಪಾರ್ಕ್‌ʼಗೆ ಹೊಸ ಸೇರ್ಪಡೆ

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿದ್ದು ನೆನಪಿರಬೇಕಲ್ಲಾ? ಆ ಚಿತ್ರದಲ್ಲಿ ಪ್ರೇಮ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುನ್ನ ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಮಹಾಂತೇಶ್‍, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ‌ ಈ ಚಿತ್ರಕ್ಕಿದ್ದು, ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಪ್ರೇಮ್‍ ಅವರ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಪ್ರೇಮ್‍ ಪಾತ್ರವೇನು? ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆ ಬರಬಹುದು. ಪ್ರೇಮ್‍ ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ನಿರ್ದೇಶಕ ಮಹಾಂತೇಶ್ ಹಂದ್ರಾಳ್, ಪ್ರೇಮ್‍ ಅವರಿಗೆಂದೇ ವಿಶೇಷ ಪಾತ್ರವನ್ನು ಡಿಸೈನ್ ಮಾಡಿದ್ದಾರಂತೆ. ಹಿಂದೆಂದೂ ಕಾಣದ ಲುಕ್‍ನಲ್ಲಿ ಪ್ರೇಮ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದಲ್ಲದೆ, ಕಳೆದ ವರ್ಷ ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಚಿತ್ರದ ಮುಹೂರ್ತವಾಗಿತ್ತು. ಈ ಚಿತ್ರದಲ್ಲಿ ಅವರು ಖಡಕ್‍ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ‘ಕೃಷ್ಣಂ ಪ್ರಣಯ ಸಖಿ’ ಖ್ಯಾತಿಯ ಶರಣ್ಯ ಶೆಟ್ಟಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

3 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

13 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

20 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

37 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago