ಮನರಂಜನೆ

‘ನೈಸ್ ರೋಡ್‍’ ಆಗಿದ್ದು ಈಗ ‘ನೈಟ್ ರೋಡ್’ ಆಯ್ತು

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ ನೋಟೀಸ್‍ ಬಂದಿತ್ತು. ಬೇರೆ ದಾರಿ ಇಲ್ಲದೆ ಇದೀಗ ಚಿತ್ರಕ್ಕೆ ‘ನೈಟ್‍ ರೋಡ್‍’ ಎಂದು ಮರುನಾಮಕರಣ ಮಾಡುವುದರ ಜೊತೆಗೆ ಚಿತ್ರವನ್ನು ಇದೇ ಸೆ. 27ರಂದು ರಾಜ್ಯಾದ್ಯಂತ ಬಿಡುಗಡೆಗೆ ಮಾಡಲಾಗುತ್ತಿದೆ.

‘ನೈಟ್ ರೋಡ್‍’ ಚಿತ್ರದಲ್ಲಿ ಧರ್ಮ, ಗಿರಿಜಾ ಲೋಕೇಶ್‍, ಮಂಜು ರಂಗಾಯಣ, ಗೋವಿಂದೇ ಗೌಡ, ರವಿಕಿಶೋರ್, ಸಚ್ಚಿ, ಸುರೇಖ, ಮಂಜು ಕ್ರಿಶ್, ಪ್ರಭು ರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸತೀಶ್‍ ಆರ್ಯನ್‍ ಸಂಗೀತ ಮತ್ತು ಪ್ರವೀಣ್‍ ಶೆಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರವನ್ನು ಗೋಪಾಲ್ ಹಳೆಪಾಳ್ಯ ನಿರ್ಮಿಸಿ-ನಿರ್ದೇಶನ ಮಾಡಿದ್ದಾರೆ.

‘ನೈಟ್ ರೋಡ್’ ಒಂದು ಸಸ್ಪೆನ್ಸ್ ಥ್ರಿಲ್ಲರ್‍ ಚಿತ್ರವಾಗಿದ್ದು, ರಸ್ತೆಯಲ್ಲಾಗುವ ಒಂದಿಷ್ಟು ವಿಚಿತ್ರ ಘಟನೆಗಳ ಸುತ್ತ ಸುತ್ತುತ್ತದೆ. ‘ನೈಸ್‍ ರೋಡ್‍’ ಎಂಬುದು ಒಂದು ಬ್ರಾಂಡ್‍ ಹೆಸರು. ಹಾಗಿರುವಾಗ, ಅವರ ಅನುಮತಿ ಪಡೆದು ಶೀರ್ಷಿಕೆ ದಾಖಲಿಸಿದ್ದೀರಾ ಎಂಬ ಪ್ರಶ್ನೆಗೆ, ನೈಸ್‍ ರಸ್ತೆಗೂ ತಮ್ಮ ಚಿತ್ರಕ್ಕೂ ಸಂಬಂಧವಿಲ್ಲ ಎಂದು ನಿರ್ದೇಶಕರು ಹೇಳಿದ್ದರು.

ಈ ಕುರಿತು ಮಾತನಾಡಿದ್ದ ನಿರ್ದೇಶಕ ಗೋಪಾಲ್ ‍ಹಳೆಪಾಳ್ಯ, ‘ಇದೊಂದು ಕಾಲ್ಪನಿಕ ಕಥೆ. ನೈಸ್ ರೋಡ್‍ಗೂ ನಮ್ಮ ಸಿನಿಮಾಗೂ ಸಂಬಂಧವಿಲ್ಲ. ಹಳ್ಳಿಯ ಮುಂದೆ ಹೈವೇ ರಸ್ತೆಯಿರುತ್ತದೆ. ಆ ರಸ್ತೆ ಎಷ್ಟು ನೈಸಾಗಿದೆ ಅಂತ ಊರ ಜನ ಹೇಳುತ್ತಿರುತ್ತಾರೆ. ಅದನ್ನೇ ಚಿತ್ರದ ಟೈಟಲ್ ಆಗಿಟ್ಟಿದ್ದೇವೆ’ ಎಂದು ಹೇಳಿದ್ದರು. ಈಗ ಸಂಸ್ಥೆಯಿಂದ ನೋಟೀಸ್‍ ಬಂದ ಹಿನ್ನೆಲೆಯಲ್ಲಿ ಹೆಸರನ್ನು ಬದಲಾಯಿಸಲಾಗಿದೆ.

ಇದುವರೆಗೂ 85 ಚಿತ್ರಗಳಲ್ಲಿ ಪೊಲೀಸ್‍ ಆಗಿ ಕಾಣಿಸಿಕೊಂಡಿರುವ ಧರ್ಮ, ಪೊಲೀಸ್‍ ಅಧಿಕಾರಿಯಾಗಿ ನಟಿಸುತ್ತಿರುವ 86ನೇ ಚಿತ್ರ ಇದು. ಈ ಚಿತ್ರದ ಕುರಿತು ಮಾತನಾಡುವ ಅವರು, ‘ಇಲ್ಲಿ ನಾನು ಹೀರೋ ಎನ್ನುವುದಕ್ಕಿಂತ ಕಥೆಯೇ ಹೀರೋ. ಕರ್ಮದ ಬಗ್ಗೆ ಕಥೆ ಹೇಳಲಾಗಿದೆ. ಈ ಜನ್ಮದಲ್ಲಿ ಮಾಡಿದ ಪಾಪಕ್ಕೆ, ಈ ಜನ್ಮದಲ್ಲೇ ಶಿಕ್ಷೆ ಸಿಗಬೇಕು, ಮುಂದಿನ ಜನ್ಮಕ್ಕೆ ಯಾಕೆ ಮುಂದೂಡಲಾಗುತ್ತದೆ ಎಂಬ ಸೂಕ್ಷ್ಮವನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ’ ಎನ್ನುತ್ತಾರೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

47 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago