ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಮಾಯವಾಗುತ್ತಿದ್ದರೆ, ಇನ್ನೊಂದು ಕಡೆ ಒಪ್ಪಿದ ಚಿತ್ರಗಳು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ. ಮೂರ್ನಾಲ್ಕು ಚಿತ್ರಗಳಲ್ಲಿ ನಟಿಸಿರುವ ನಿರಂಜನ್, ಇನ್ನೂ ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಲೇ ಇದ್ದಾರೆ.
ಹೀಗಿರುವಾಗಲೇ, ನಿರಂಜನ್ ಇದೀಗ ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ. ಈ ಬಾರಿ ಅವರಿಗೆ ಬ್ರೇಕ್ ಕೊಡುವುದಕ್ಕೆ ಹೊರಟಿರುವವರು ನಟ-ನಿರ್ದೇಶಕ ಅರ್ಜುನ್ ಸರ್ಜಾ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪ್ರೇಮ ಬರಹ’ ಚಿತ್ರದ ನಂತರ ಅವರು ಕನ್ನಡದಲ್ಲಿ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಇನ್ನು, ನಟನೆಯಿಂದಲೂ ದೂರವೇ ಇದ್ದರು.
ಇದೀಗ ಅರ್ಜುನ್ ಸರ್ಜಾ, ನಿರಂಜನ್ ಸುಧೀಂದ್ರ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ಚಿತ್ರವನ್ನು ಅವರು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ತಮ್ಮ ಶ್ರೀ ರಾಮ್ ಫಿಲಂಸ್ ಇಂಟರ್‍ನ್ಯಾಷನಲ್ ಸಂಸ್ಥೆಯಡಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆ, ಕಥೆ ಏನು ಮುಂತಾದ ವಿಷಯಗಳನ್ನು ಅರ್ಜುನ್ ಸರ್ಜಾ ಸದ್ಯ ಬಿಟ್ಟುಕೊಟ್ಟಿಲ್ಲ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಇಂದು ( ಅಕ್ಟೋಬರ್ 16 ) ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಅರ್ಜುನ್ ಸರ್ಜಾ ತಮ್ಮ ಈ ಚಿತ್ರಕ್ಕೆ ʼಸೀತಾ ಪಯಣ ಎಂಬ ಹೆಸರನ್ನಿಟ್ಟಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ತಮಿಳು ಭಾಷೆಗಳಲ್ಲಿಯೂ ಈ ಚಿತ್ರ ತೆರೆ ಕಾಣಲಿದ್ದು, ಅಲ್ಲಿ ʼಸೀತಾ ಪಯಣಂʼ ಎಂಬ ಹೆಸರಿನಡಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಅಂದಹಾಗೆ, ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರಕ್ಕೆ ಅರ್ಜುನ್ ಸರ್ಜಾ ಕಥೆ, ಚಿತ್ರಕಥೆ ಬರೆದಿದ್ದು, ಆ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…