ಮನರಂಜನೆ

ಮತ್ತೆ ಬಂದರು ಅರ್ಜುನ್‍ ಸರ್ಜಾ; ನಿರಂಜನ್ ಅಭಿನಯದಲ್ಲಿ ಹೊಸ ಚಿತ್ರ

ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಮಾಯವಾಗುತ್ತಿದ್ದರೆ, ಇನ್ನೊಂದು ಕಡೆ ಒಪ್ಪಿದ ಚಿತ್ರಗಳು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ. ಮೂರ್ನಾಲ್ಕು ಚಿತ್ರಗಳಲ್ಲಿ ನಟಿಸಿರುವ ನಿರಂಜನ್‍, ಇನ್ನೂ ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಲೇ ಇದ್ದಾರೆ.

ಹೀಗಿರುವಾಗಲೇ, ನಿರಂಜನ್‍ ಇದೀಗ ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ. ಈ ಬಾರಿ ಅವರಿಗೆ ಬ್ರೇಕ್‍ ಕೊಡುವುದಕ್ಕೆ ಹೊರಟಿರುವವರು ನಟ-ನಿರ್ದೇಶಕ ಅರ್ಜುನ್‍ ಸರ್ಜಾ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪ್ರೇಮ ಬರಹ’ ಚಿತ್ರದ ನಂತರ ಅವರು ಕನ್ನಡದಲ್ಲಿ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಇನ್ನು, ನಟನೆಯಿಂದಲೂ ದೂರವೇ ಇದ್ದರು.

ಇದೀಗ ಅರ್ಜುನ್‍ ಸರ್ಜಾ, ನಿರಂಜನ್‍ ಸುಧೀಂದ್ರ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ಚಿತ್ರವನ್ನು ಅವರು ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ತಮ್ಮ ಶ್ರೀ ರಾಮ್‍ ಫಿಲಂಸ್ ಇಂಟರ್‍ನ್ಯಾಷನಲ್‍ ಸಂಸ್ಥೆಯಡಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರು ನಟಿಸುತ್ತಿದ್ದಾರೆ, ಕಥೆ ಏನು ಮುಂತಾದ ವಿಷಯಗಳನ್ನು ಅರ್ಜುನ್‍ ಸರ್ಜಾ ಸದ್ಯ ಬಿಟ್ಟುಕೊಟ್ಟಿಲ್ಲ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಇಂದು ( ಅಕ್ಟೋಬರ್‌ 16 ) ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಅರ್ಜುನ್‌ ಸರ್ಜಾ ತಮ್ಮ ಈ ಚಿತ್ರಕ್ಕೆ ʼಸೀತಾ ಪಯಣ ಎಂಬ ಹೆಸರನ್ನಿಟ್ಟಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು ಹಾಗೂ ತಮಿಳು ಭಾಷೆಗಳಲ್ಲಿಯೂ ಈ ಚಿತ್ರ ತೆರೆ ಕಾಣಲಿದ್ದು, ಅಲ್ಲಿ ʼಸೀತಾ ಪಯಣಂʼ ಎಂಬ ಹೆಸರಿನಡಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಅಂದಹಾಗೆ, ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರಕ್ಕೆ ಅರ್ಜುನ್‍ ಸರ್ಜಾ ಕಥೆ, ಚಿತ್ರಕಥೆ ಬರೆದಿದ್ದು, ಆ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ.

ಭೂಮಿಕಾ

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago