ಮನರಂಜನೆ

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ …

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್‍ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಗಸ್ಟ್ 20ರಂದು ನಿರಂಜನ್‍ ಹುಟ್ಟುಹಬ್ಬವಿತ್ತು. ಈ ಸಂದರ್ಭದಲ್ಲಿ ಚಿತ್ರದ ಟೀಸರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡದವರು ತಮ್ಮ ಚಿತ್ರದ ನಾಯಕನಿಗೆ ಶುಭ ಕೋರಿದ್ದಾರೆ. ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸಿರುವ ಈ ಚಿತ್ರವನ್ನು ಮಹಾಂತೇಶ್‍ ಹಂದ್ರಾಳ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಅನ್ನೋದನ್ನು ಟೀಸರ್‍ನಲ್ಲಿ ತೋರಿಸಲಾಗಿದೆ.

‘ಸ್ಪಾರ್ಕ್‍’ ಕುರಿತು ಮಾತನಾಡುವ ನಿರಂಜನ್‍, ‘ಇದು ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ, ಏನೇ ನಡೆದರು‌ ಮೊದಲು ಧ್ವನಿ ಎತ್ತುವುದು‌ ಪತ್ರಕರ್ತರು. ಅವರಿಗೆ ಸಿಗುವ ಗೌರವ ಕಡಿಮೆ. ನಾನು ಚಿತ್ರದಲ್ಲಿ ಪತ್ರಕರ್ತನ ಪಾತ್ರ ನಿರ್ವಹಿಸುತ್ತಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಸ್ಟ್ರಾಂಗ್ ಆಗಿದೆ. ಇದು ಹಗರಣ ಕಥಾಹಂದರ ಹೊಂದಿರುವ ಚಿತ್ರ. ಕಮರ್ಷಿಯಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ’ ಎಂದರು.

‘ನೆನಪಿರಲಿ’ ಪ್ರೇಮ್ ಮಾತನಾಡಿ, ‘ನಾನು ಚಿತ್ರರಂಗಕ್ಕೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ, ಬ್ಯಾಕ್ ಟು ಬ್ಯಾಕ್ ಪ್ರೇಮಕಥೆಗಳಲ್ಲಿ ನಟಿಸಿದೆ. ಆ ಚಿತ್ರಗಳು ಯಶಸ್ವಿಯಾಗಿ, ನನ್ನ ಕ್ಲಾಸ್ ಹೀರೋ ಎಂದು ಬ್ರಾಂಡ್‍ ಮಾಡಿದರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಮಾಸ್ ಪಾತ್ರವನ್ನು ಕೊಟ್ಟಿದ್ದಾರೆ’ ಎಂದರು.

ನಿರ್ದೇಶಕ ಮಹಾಂತೇಶ್ ಮಾತನಾಡಿ, ‘’ಸ್ಪಾರ್ಕ್’ ಒಂದು ಹಗರಣದ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸಚಿನ್ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ’ ಎಂದರು.

‘ಸ್ಪಾರ್ಕ್’ ಚಿತ್ರದಲ್ಲಿ ನಿರಂಜನ್‍ಗೆ ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ರಮೇಶ್ ಇಂದಿರಾ, ಧರ್ಮಣ್ಣ ಕಡೂರು, ಸಾಧು ಕೋಕಿಲಾ, ಬಲ ರಾಜವಾಡಿ ಮುಂತಾದವರು ನಟಿಸುತ್ತಿದ್ದಾರೆ. ಈಗಾಗಲೇ ಶೇ. 60ರಷ್ಟು ಚಿತ್ರೀಕರಣ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ಚಿತ್ರೀಕರಣ ಮುಗಿದು, ಈ ವರ್ಷ ಚಿತ್ರ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

12 mins ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

18 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

27 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

35 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

2 hours ago