ಮನರಂಜನೆ

4 ವರ್ಷಗಳ ದಾಂಪತ್ಯ ಜೀವನಕ್ಕೆ ತಿಲಾಂಜಲಿ ಹಾಡಿದ ಚಂದನ್‌-ನಿವೇದಿತಾ ಜೋಡಿ!

ಕನ್ನಡದ ಖ್ಯಾತ ಗಾಯಕ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ದಾಂಪತ್ಯ ಜೀವನ ಇಂದಿಗೆ ಅಂತ್ಯವಾಗಿದೆ. ಹೌದು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಕೋರ್ಟ್‌ ಇಂದು ವಿಚ್ಛೇದನ ಮಂಜೂರು ಮಾಡಿದೆ. ಆ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನ ಮುಗಿದಿದೆ.

ಕೆಲವೊಂದು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಹೊಂದುವ ಸಲುವಾಗಿ ಈ ಜೋಡಿ ವಿಚ್ಛೇದನ ಪಡೆಯಲು ಕೋರ್ಟ್‌ ಮೆಟ್ಟಿಲೇರಿತ್ತು. ಇದನ್ನು ಸಮ್ಮತಿಸಿದ ನ್ಯಾಯಾಲಯ ಇವರಿಗೆ ವಿಚ್ಛೇದನ ನೀಡಿ ಆದೇಶ ಹೊರಡಿಸಿದೆ.

ವಿಚ್ಛೇದನಕ್ಕಾಗಿ ಕಾಯುವ ಜೋಡಿಗಳಿಗೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತವೆ. ಆದರೆ ಈ ಜೋಡಿಗೆ ಕೇವಲ ಒಂದೇ ದಿನದಲ್ಲಿ ವಿಚ್ಛೇದನ ಸಿಕ್ಕಿದೆ. ಇಬ್ಬರೂ ನಗು-ನಗುತ್ತಲೇ ಕೋರ್ಟ್‌ ಆವರಣಕ್ಕೆ ಬಂದು, ಸರದಿಯಲ್ಲಿ ಪಕ್ಕ-ಪಕ್ಕ ಕೂತು ಕೋರ್ಟ್‌ ನೀಡಿದ ತೀರ್ಪು ಆಲಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಈ ಸಂಬಂದ ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ ತೀರ್ಪು ನೀಡಿದೆ. ಸಿಕ್ಷನ್‌ 13B ಅಡಿಯಲ್ಲಿ ಇಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ದೊರಕಿದೆ.

ಇನ್ನು ಈ ಇಬ್ಬರ ವಿಚ್ಛೇದನ ವಿಷಯಕ್ಕೆ ಸಂಬಂಧಿಸಿದಂತೆ, ಈ ಜೋಡಿಗೆ ಮಗು ಪಡೆಯುವ ವಿಷಯದಲ್ಲಿ ಆಗಾಗ್ಗೆ ಕಿರಿಕ್‌ ಆಗುತ್ತಲೇ ಇತ್ತಂತೆ. ಮದುವೆಯಾಗಿ ನಾಲ್ಕು ವರ್ಷಗಳು ಕಳೆದರು ಸಹಾ ಯಾವುದೇ ಮಗುವನ್ನು ಪಡೆದಿರಲಿಲ್ಲ. ಈ ವಿಚಾರಕ್ಕೆ ಇಬ್ಬರಿಗೂ ಜಗಳ ಆಗುತ್ತಿತ್ತು ಎನ್ನಲಾಗಿದ್ದು, ನಿವೇದಿತಾ ಅವರು ಮಗು ಪಡೆಯುವುದನ್ನು ನಿರಾಕರಿಸಿದ್ದರು ಎಂದು ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸುದ್ದಿ ಹರಿದಾಡುತ್ತಿದೆ.

ಆದರೆ ವಿಚ್ಛೇದನ ಪಡೆದಿರುವ ದಂಪತಿಯೇ ಇದಕ್ಕೆ ಉತ್ತರ ನೀಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago