ಮನರಂಜನೆ

ಇನ್ನೊಂದು ತುಣುಕನ್ನೂ ತೋರಿಸುವುದಿಲ್ಲ: ನಟ ಉಪೇಂದ್ರ ಸ್ಪಷ್ಟನೆ

ಉಪೇಂದ್ರ ಅಭಿನಯದ ‘UI’ ಚಿತ್ರದ ವಾರ್ನರ್‍ ಹೆಸರಿನ ತುಣುಕು ಬಿಡುಗಡೆಯಾಗಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಷ್ಟೇ ಅಲ್ಲ, ಈ ವಾರ್ನರ್‍ನಿಂದ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ವಾರ್ನರ್‍ ಏನೋ ಆಯ್ತು, ಚಿತ್ರದ ಟ್ರೇಲರ್‍ ಯಾವಾಗ ಎಂಬ ಪ್ರಶ್ನೆಗೆ, ಇನ್ನೊಂದು ತುಣುಕನ್ನೂ ತೋರಿಸುವುದಿಲ್ಲ, ಇನ್ನೇನಿದ್ದರೂ ಚಿತ್ರದಲ್ಲೇ ನೋಡಿ ಎನ್ನುತ್ತಾರೆ ಉಪೇಂದ್ರ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನಗೆ ಚಿತ್ರ ಬಿಡುಗಡೆಗೂ ಮೊದಲು ಚಿತ್ರದ ಯಾವ ದೃಶ್ಯವನ್ನೂ ತೋರಿಸುವುದಕ್ಕೂ ಇಷ್ಟವಿಲ್ಲ. ಆದರೆ, ಟ್ರೇಲರ್‍ ಮತ್ತು ಟೀಸರ್‍ ಬಿಡುಗಡೆ ಮಾಡುವುದು ಟ್ರೆಂಡ್‍ ಆಗಿದೆ. ಅದು ಸರಿಯೋ, ತಪ್ಪೋ ಗೊತ್ತಿಲ್ಲ. ಪ್ರೇಕ್ಷಕರಿಗೆ ಚಿತ್ರವನ್ನು ಮುಟ್ಟಿಸುವ ನಿಟ್ಟಿನಲ್ಲಿ ಅದು ಅಗತ್ಯವಿರಬಹುದು. ವೈಯಕ್ತಿಕವಾಗಿ ನನಗೆ ಅದು ಇಷ್ಟವಿಲ್ಲ. ನಿರ್ದೇಶಕನಾಗಿ, ಮುಂದಿನ ಚಿತ್ರದಲ್ಲಿ ಒಂದು ಸಣ್ಣ ತುಣುಕು ಸಹ ತೋರಿಸದೆ, ಹಿಟ್ ಮಾಡಿ ತೋರಿಸಬೇಕು ಎಂಬುದು ನನ್ನಾಸೆ. ಇಲ್ಲಿ ಹಲವು ವಿಷಯಗಳನ್ನು ಇನ್ನೂ ಬಿಟ್ಟುಕೊಟ್ಟಿಲ್ಲ. ಕೆಲವು ವಿಷಯಗಳನ್ನು ಮಾತ್ರ ತೋರಿಸಿದ್ದೇವೆ. ಇನ್ನೇನೂ ತೋರಿಸುವುದಿಲ್ಲ. ಎಲ್ಲವನ್ನೂ ಸಿನಿಮಾದಲ್ಲೇ ನೋಡಿ’ ಎಂದರು.

‘UI’ ಚಿತ್ರದ ಮೂಲಕ ಹಲವು ವಿಷಯಗಳನ್ನು ಸಾಂಕೇತಿಕವಾಗಿ ಹೇಳಿರುವುದಾಗಿ ಹೇಳುವ ಅವರು, ‘ಚಿತ್ರದಲ್ಲೊಂದು ಕಥೆ ಹೇಳಿದ್ದೇನೆ. ಅದರ ಹಿಂದೆ ಇನ್ನೇನೋ ಇದೆ. ಇಲ್ಲಿ ಹಲವು ವಿಷಯಗಳನ್ನು ಸಾಂಕೇತಿಕವಾಗಿ ಹೇಳುವ ಪ್ರಯತ್ನ ಮಾಡಿದ್ದೇನೆ. ಇಡೀ ಚಿತ್ರದಲ್ಲಿ ರೂಪಕಗಳು ಜಾಸ್ತಿ ಇರುತ್ತವೆ. ಇದೊಂದು ಪಕ್ಕಾ ಮನರಂಜನೆಯ ಸಿನಿಮಾ. ಅದರ ಹಿಂದಿನ ವಿಷಯಗಳನ್ನು ಎಷ್ಟು ಜನರಿಗೆ ಅರ್ಥವಾಗುತ್ತದೆ ಎಂದು ನಾನೂ ಕುತೂಹಲದಿಂದ ಕಾಯುತ್ತಿದ್ದೇನೆ. ಜನರಿಗೆ ಅರ್ಥವಾಗುತ್ತದೆ ಎಂಬ ನಂಬಿಕೆ ನನಗಿದೆ’ ಎಂದರು.

‘UI’ ಡಿ. 20ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಉಪೇಂದ್ರ ಅವರೇ ಹೊತ್ತಿದ್ದು, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಜೊತೆಗೆ ಸಾಧು ಕೋಕಿಲ, ಅಚ್ಯುತ್‍ ಕುಮಾರ್, ರೀಷ್ಮಾ ನಾಣಯ್ಯ, ರವಿಶಂಕರ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago