ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್, ರಾಮ್‍ಚರಣ್ ತೇಜ, ಜ್ಯೂನಿಯರ್ ಎನ್.ಟಿ.ಆರ್ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ ದೇಶವಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಸಾಕಷ್ಟು ಡಿಮ್ಯಾಂಡ್ ಇದೆ. ‘ಹಾಗಾಗಿ ಇನ್ನು ಮುಂದೆ ಪ್ಯಾನ್ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಕರೆಯುವುದು ಸೂಕ್ತ ಎಂದು ನಿರ್ದೇಶಕ ರಾಮ್ ಗೋಪಾಲ್ ವರ್ಮ ಹೇಳಿದ್ದಾರೆ.
ವರ್ಮ ತಮ್ಮ ಟ್ವೀಟ್‍ಗಳಿಗೆ ಬಹಳ ಜನಪ್ರಿಯರು. ಮನಸ್ಸಿನಲ್ಲಿದ್ದುದನ್ನು ಯಾವುದೇ ಮುಚ್ಚುಮರೆ ಇಲ್ಲದೆ ನೇರವಾಗಿ ಟ್ವೀಟ್ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣಕ್ಕೆ ಸಾಕಷ್ಟು ಟೀಕೆಗಳನ್ನು ಅವರು ಎದುರಿಸಿದ್ದಾರೆ. ಈಗ ಅವರು ತೆಲುಗು ನಟರು ಹೇಗೆ ಇಡೀ ದೇಶದಲ್ಲಿ ತಮ್ಮ ಚಿತ್ರಗಳಿಂದ ಮಿಂಚುತ್ತಿದ್ದಾರೆ ಎಂಬುದನ್ನು ಅವರು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ 2’ ಬಿಡುಗಡೆಯಾಗಿ, ಭಾರತದ ಹಿಂದಿನ ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರ ಶಾರೂಖ್ ಖಾನ್ ಅಭಿನಯದ ‘ಜವಾನ್’ ಆಗಿತ್ತು. ಆ ದಾಖಲೆಯನ್ನು ‘ಪುಷ್ಪ 2’ ಇದೀಗ ಮುರಿದು ಹಾಕಿದೆ. ಚಿತ್ರವು ಮೊದಲ ನಾಲ್ಕು ದಿನಗಳಲ್ಲಿ ಜಗತ್ತಿನಾದ್ಯಂತ 800 ಕೋಟಿ ರೂ. ಸಂಪಾದಿಸಿದೆ.
ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ವರ್ಮ, ‘ಬಾಲಿವುಡ್ ಇತಿಹಾಸದಲ್ಲಿ ಅತ್ಯಂತ ಗಳಿಕೆ ಮಾಡಿದ ಸಿನಿಮಾ ಎಂದರೆ ಅದು ತೆಲುಗಿನಿಂದ ಡಬ್ ಆದ ‘ಪುಷ್ಪ 2’. ಬಾಲಿವುಡ್ ಇತಿಹಾಸದಲ್ಲಿ ಅತ್ಯಂತ ದೊಡ್ಡ ಹೀರೋ ಎಂದರೆ, ಅದು ಹಿಂದಿ ಮಾತನಾಡಲು ಬರದ ತೆಲುಗು ನಟ ನಟ ಅಲ್ಲು ಅರ್ಜುನ್. ಹಾಗಾಗಿ, ಇನ್ನು ಮುಂದೆ ಪ್ಯಾನ್ ಇಂಡಿಯಾ ಇಲ್ಲ. ತೆಲುಗು ಇಂಡಿಯಾ’ ಎಂದು ಬರೆದುಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮ ಅವರ ಟ್ವೀಟ್‍ಗೆ ನೆಟ್ಟಿಗರಿಂದ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…