KD Film
ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ ಸರ್ಜಾ ಬಣ್ಣಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕನ್ನಡದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ಧ್ರುವ, ‘ಅಷ್ಟೊಂದು ಜನ ದೊಡ್ಡ ಕಲಾವಿದರ ಜೊತೆಗೆ ಕೆಲಸ ಮಾಡುವ ಅವಜಾಶ ಕೊಟ್ಟ ಕೆ.ವಿ.ಎನ್ ಸಂಸ್ಥೆಗೆ ಧನ್ಯವಾದ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರಿಂದ ತುಂಬಾ ಕಲಿತಿದ್ದೇನೆ. ನಮ್ಮ ಸಿನಿಮಾದ ನಿಜವಾದ ಹೀರೋ ಅಂದರೆ ಅದು ನಿರ್ದೇಶಕ ಪ್ರೇಮ್. ಅವರದು ಒಂಥರಾ ಅತೃಪ್ತ ಆತ್ಮ. ಎಷ್ಟು ಕೆಲಸ ಮಾಡಿದರೂ ಅವರಿಗೆ ತೃಪ್ತಿ ಆಗಲ್ಲ. ಇನ್ನೂ ಒಂದು ಟೇಕ್ ಕೇಳುತ್ತಲೇ ಇರುತ್ತಾರೆ’ ಎಂದರು.
ನಿರ್ದೇಶಕ ಪ್ರೇಮ್ ಮಾತನಾಡಿ, ‘ಕೆವಿಎನ್ ಸಂಸ್ಥೆ ಚಿತ್ರದ ಅದ್ದೂರಿತನದ ವಿಷಯದಲ್ಲಿ ಯಾವುದಕ್ಕೂ ಕೊರತೆ ಮಾಡಿಲ್ಲ. ನಿರ್ಮಾಪಕರೇ ನಮ್ಮ ಚಿತ್ರದ ನಿಜವಾದ ಹೀರೋ. ಅವರ ಸಿನಿಮಾ ಪ್ರೀತಿಗೆ ಧನ್ಯವಾದ. ಇದು 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ. ಕೆಡಿ ಅಂದ್ರೆ ಕಾಳಿದಾಸ ಎಂದರ್ಥ. ಆತ ಎಷ್ಟು ಮುಗ್ಧನೋ, ಅಷ್ಟೇ ರಾ ಆಗಿರುತ್ತಾನೆ. ಚಿತ್ರಕ್ಕೆ ಒಟ್ಟು 160 ರಿಂದ 180 ದಿನಗಳವರೆಗೆ ಶೂಟಿಂಗ್ ಮಾಡಿದ್ದೇವೆ. ಚಿತ್ರಕ್ಕೆ ಸಾಕಷ್ಟು ಕೆಲಸವಿದ್ದುದರಿಂದ ನಿಧಾನವಾಗಿದೆ ಎಂದನಿಸಬಹುದು. ಆದರೆ, ಅಷ್ಟೇನೂ ತಡವಾಗಿಲ್ಲ. ಚಿತ್ರವು ಇನ್ನು ಮೂರು ತಿಂಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಹೇಳಿದರು.
‘ಕೆಡಿ – ದಿ ಡೆವಿಲ್’ ಚಿತ್ರದ ಸಮಾರಂಭದಲ್ಲಿ ಸಂಜಯ್ ದತ್, ರವಿಚಂದ್ರನ್, ರಮೇಶ್ ಅರವಿಂದ್, ಶಿಲ್ಪಾ ಶೆಟ್ಟಿ ಮುಂತಾದವರು ಹಾಜರಿದ್ದರು. ಚಿತ್ರಕ್ಕೆ ವಿಲಿಯಂ ಡೇವಿಡ್ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯ ಸಂಗೀತವಿದೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…