ಮನರಂಜನೆ

‘ಟಾಕ್ಸಿಕ್’ ಬರಬೇಕಿದ್ದ ದಿನದಂದು ‘ವಿದ್ಯಾಪತಿ’ ಆಗಮನಕ್ಕೆ ಮುಹೂರ್ತ ಸಿಕ್ಕಾಯ್ತು

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ.

‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ ದಿನ ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಬಿಡುಗಡೆಯಾಬೇಕಿತ್ತು. ಆದರೆ, ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿಯದಿರುವುದರಿಂದ ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ. ಹೀಗಿರುವಾಗಲೇ, ಅದೇ ದಿನದಂದು ‘ವಿದ್ಯಾಪತಿ’ ಚಿತ್ರದ ಬಿಡುಗಡೆ ಘೋಷಣೆಯಾಗಿದೆ. ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವ ಭಯದಲ್ಲಿ, ಆ ದಿನ ಚಿತ್ರ ಬಿಡುಗಡೆ ಮಾಡುವುದಕ್ಕೆ ಯಾರೂ ಮುಂದೆ ಬಂದಿರಲಿಲ್ಲ. ಯಾವಾಗ ‘ಟಾಕ್ಸಿಕ್‍’ ಬರುವುದು ಅನುಮಾನವಾಗಿದೆಯೋ, ಆ ಅವಕಾಶವನ್ನು ‘ವಿದ್ಯಾಪತಿ’ ತಂಡದವರು ಬಳಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಡಾಲಿ ಪಿಕ್ಚರ್ಸ್ ಸಂಸ್ಥೆಯಡಿ ‘ಟಗರು ಪಲ್ಯ’ ಚಿತ್ರದ ನಂತರ ಧನಂಜಯ್‍, ನಾಗಭೂಷಣ್‍ ಅಭಿನಯದಲ್ಲಿ ‘ವಿದ್ಯಾಪತಿ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ವಿದ್ಯಾಪತಿ’, ಡಾಲಿ ಪಿಕ್ಚರ್ಸ್‍ನ ನಾಲ್ಕನೇ ಚಿತ್ರ. ಕೆಲವು ವರ್ಷಗಳ ಹಿಂದೆ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾದ ‘ಇಕ್ಕಟ್’ ಚಿತ್ರವನ್ನು ನಿರ್ದೇಶಿಸಿದ್ದ ಇಶಾಂ ಮತ್ತು ಹಸೀಂ ಖಾನ್, ‘ವಿದ್ಯಾಪತಿ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ನಿಭಾಯಿಸಿದ್ದಾರೆ.

‘ವಿದ್ಯಾಪತಿ’ ಒಂದು ಕಾಮಿಡಿ ಚಿತ್ರವಾಗಿದ್ದು, ಇದರಲ್ಲಿ ನಾಗಭೂಷಣ್, ಕರಾಟೆ ಪಟುವಾಗಿ ನಟಿಸುತ್ತಿದ್ದಾರೆ. ಇನ್ನು, ಕರಾಟೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ. ನಾಯಕಿಯಾಗಿ ‘ಉಪಾಧ್ಯಕ್ಷ’ ಖ್ಯಾತಿಯ ಮಲೈಕಾ ಟಿ ವಸುಪಾಲ್, ನಾಗಭೂಷಣ್‍ಗೆ ಜೋಡಿಯಾಗಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಈಗಾಗಲೇ ‘ವಿದ್ಯಾಪತಿ ಚಿತ್ರದ ‘ಅಯ್ಯೋ ವಿಧಿಯೇ …’ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ. ಸದ್ಯದಲ್ಲೇ ಚಿತ್ರದ ಹಾಡುಗಳು ಮತ್ತು ಟೀಸರ್‍ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

8 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

8 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago