ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್ ಖೇರ್ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ.
‘ಫಾರೆಸ್ಟ್’ ಚಿತ್ರದ ‘ಓಡೋ ಓಡೋ ಓಡೋ …’ ಚಿತ್ರದ ಹಾಡಿಗೆ ಪುನೀತ್ ಆರ್ಯ ಸಾಹಿತ್ಯ ಬರೆದಿದ್ದು, ಕೈಲಾಶ್ ಖೇರ್ ಮತ್ತು ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಇನ್ನು, ಯೂಟ್ಯೂಬ್‍ನ ಎನ್.ಎಂ.ಕೆ. ಸಿನಿಮಾಸ್ ಚಾನಲ್‍ನಲ್ಲಿ ಈ ಹಾಡು ಬಿಡುಗಡೆ ಆಗಿದೆ. ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.
ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್‍ನಡಿ ಎನ್.ಎಂ. ಕಾಂತರಾಜ್ ನಿರ್ಮಿಸಿರುವ ‘ಫಾರೆಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಕಾಡು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಹೆಸರೇ ಹೇಳುವಂತೆ ಕಾಡಿನಲ್ಲಿ ನಡೆಯುವ ಸಾಹಸಮಯ ಕಥೆ ಇದಾಗಿದ್ದು, ಒಂದಿಷ್ಟು ಜನ ಕಾಡಿಗೆ ಯಾಕೆ ಹೋಗುತ್ತಾರೆ, ಹೋಗಿ ಏನು ಮಾಡುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡಲಾಗಿದೆ.
‘ಫಾರೆಸ್ಟ್’ ಚಿತ್ರಕ್ಕೆ ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಣಾಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ನಟಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…