ದಾಸಶ್ರೇಷ್ಠ ಪುರಂದರದಾಸರ ಕುರಿತು ಕನ್ನಡದಲ್ಲಿ ಎರಡು ಚಿತ್ರಗಳು ಬಂದಿವೆ. ಅವೆರಡೂ ಬಂದಿದ್ದು 60ರ ದಶಕದಲ್ಲಿ. ಈಗ ಸುಮಾರು 57 ವರ್ಷಗಳ ನಂತರ ಕನ್ನಡದಲ್ಲಿ ಪುರಂದರ ದಾಸರ ಕುರಿತು ಚಿತ್ರವೊಂದು ಬರುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ ‘ಹರಿದಾಸರ ದಿನಚರಿ’ ಚಿತ್ರವನ್ನು ನಿರ್ಮಿಸಿದೆ.
ಈ ಚಿತ್ರವು 15ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರದಾಸರ ದೈನಂದಿನ ಜೀವನದ ದೃಶ್ಯಗಳನ್ನು ಒಳಗೊಂಡಿದೆ. ದಾಸರು ತಮ್ಮ ದಿನಚರಿಯಲ್ಲಿ ‘ಜಗದೋದ್ಧಾರನ ಆಡಿಸಿದಳೆ ಯಶೋದೆ …’ ಸೇರಿದಂತೆ ಹಲವು ರಚನೆಗಳನ್ನು ಹೇಗೆ ಮಾಡಿದರು ಮತ್ತು ಅದರ ಹಿನ್ನೆಲೆ ಏನರಿಬಹುದು ಎಂದು ಈ ಚಿತ್ರದಲ್ಲಿಲ ಕಟ್ಟಿಕೊಡಲಾಗಿದೆ. ಈ ಚಿತ್ರದಲ್ಲಿ ದಾಸರ ಈ ವಿಶೇಷ ದಿನವನ್ನು ಮುಂಜಾನೆಯ ಪ್ರಾರ್ಥನಾ ಕರ್ಮಗಳಿಂದ ಪ್ರಾರಂಭಿಸಿ, ರಾತ್ರಿ ಮಲಗುವ ತನಕ ಚಿತ್ರಣ ನೀಡಲಾಗುತ್ತದೆ.
‘ಹರಿದಾಸರ ದಿನಚರಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಉಡುಪಿಯ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಸಹ ಹಾಜರಿದ್ದರು.
‘ಹರಿದಾಸರ ದಿನಚರಿ’ ಚಿತ್ರವು ಸಂತ-ಕವಿ ಪುರಂದರದಾಸರ ಜೀವನದ ಒಂದು ದಿನದ ಸಾರವನ್ನು ಸೆರೆಹಿಡಿಯುವ ಒಂದು ಪ್ರಯತ್ನವಾಗಿದ್ದು, ಕಲೆ ಮತ್ತು ಆಧ್ಯಾತ್ಮಿಕತೆಯನ್ನು ಮೆಚ್ಚುವ ಪ್ರೇಕ್ಷಕರೊಂದಿಗೆ ಇದು ಆಳವಾಗಿ ಪ್ರತಿಧ್ವನಿಸುತ್ತದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್.
ಕನ್ನಡದ ಖ್ಯಾತ ದಾಸ ಸಾಹಿತ್ಯದ ಗಾಯಕ ಡಾ. ವಿದ್ಯಾಭೂಷಣರು, ಈ ಚಿತ್ರದಲ್ಲಿ ಶ್ರೀ ಪುರಂದರದಾಸರಾಗಿ ಕಾಣಿಸಿಕೊಂಡಿದ್ದಾರೆ. ಇತರೆ ಪಾತ್ರಗಳಲ್ಲಿ ಘನಶ್ಯಾಮ್ ಕೆ.ವಿ, ಗೋಕುಲ್ ಅಯ್ಯರ್, ವಾಸುದೇವ ಮೂರ್ತಿ ಕೆ.ಎನ್, ಚಲಪತಿ, ಪ್ರಸನ್ನ ವೆಂಕಟೇಶ ಮೂರ್ತಿ, ಪದ್ಮಕಲಾ ಡಾ. ಜಿ. ಎಲ್ ಹೆಗ್ಡೆ ಮುಂತಾದವರಿದ್ದಾರೆ.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ಮಾಣ ಮತ್ತು ನಿರ್ದೇಶನ ಹೊಣೆ ಹೊತ್ತವರು ಗಿರೀಶ್ ನಾಗರಾಜ. ಡಾ. ವಿದ್ಯಾಭೂಷಣರು ಸಂಗೀತ ಸಂಯೋಜಿಸುವುದರ ಜೊತೆಗೆ ಎಲ್ಲಾ ಹಾಡುಗಳನ್ನು ಹಾಡಿದ್ದಾರೆ. ಚಿತ್ರಕ್ಕೆ ರೊಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುಹಾಸ್ ಜಯ್ ಅವರ ಸಂಕಲನವಿದೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…