Categories: ಮನರಂಜನೆ

ಪುರಂದರದಾಸರ ಕುರಿತು ಕನ್ನಡದಲ್ಲಿ ಇನ್ನೊಂದು ಚಿತ್ರ; ಟ್ರೇಲರ್ ಬಿಡುಗಡೆ

ದಾಸಶ್ರೇಷ್ಠ ಪುರಂದರದಾಸರ ಕುರಿತು ಕನ್ನಡದಲ್ಲಿ ಎರಡು ಚಿತ್ರಗಳು ಬಂದಿವೆ. ಅವೆರಡೂ ಬಂದಿದ್ದು 60ರ ದಶಕದಲ್ಲಿ. ಈಗ ಸುಮಾರು 57 ವರ್ಷಗಳ ನಂತರ ಕನ್ನಡದಲ್ಲಿ ಪುರಂದರ ದಾಸರ ಕುರಿತು ಚಿತ್ರವೊಂದು ಬರುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ ‘ಹರಿದಾಸರ ದಿನಚರಿ’ ಚಿತ್ರವನ್ನು ನಿರ್ಮಿಸಿದೆ.

ಈ ಚಿತ್ರವು 15ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರದಾಸರ ದೈನಂದಿನ ಜೀವನದ ದೃಶ್ಯಗಳನ್ನು ಒಳಗೊಂಡಿದೆ. ದಾಸರು ತಮ್ಮ ದಿನಚರಿಯಲ್ಲಿ ‘ಜಗದೋದ್ಧಾರನ ಆಡಿಸಿದಳೆ ಯಶೋದೆ …’ ಸೇರಿದಂತೆ ಹಲವು ರಚನೆಗಳನ್ನು ಹೇಗೆ ಮಾಡಿದರು ಮತ್ತು ಅದರ ಹಿನ್ನೆಲೆ ಏನರಿಬಹುದು ಎಂದು ಈ ಚಿತ್ರದಲ್ಲಿಲ ಕಟ್ಟಿಕೊಡಲಾಗಿದೆ. ಈ ಚಿತ್ರದಲ್ಲಿ ದಾಸರ ಈ ವಿಶೇಷ ದಿನವನ್ನು ಮುಂಜಾನೆಯ ಪ್ರಾರ್ಥನಾ ಕರ್ಮಗಳಿಂದ ಪ್ರಾರಂಭಿಸಿ, ರಾತ್ರಿ ಮಲಗುವ ತನಕ ಚಿತ್ರಣ ನೀಡಲಾಗುತ್ತದೆ.

‘ಹರಿದಾಸರ ದಿನಚರಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಉಡುಪಿಯ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಸಹ ಹಾಜರಿದ್ದರು.

‘ಹರಿದಾಸರ ದಿನಚರಿ’ ಚಿತ್ರವು ಸಂತ-ಕವಿ ಪುರಂದರದಾಸರ ಜೀವನದ ಒಂದು ದಿನದ ಸಾರವನ್ನು ಸೆರೆಹಿಡಿಯುವ ಒಂದು ಪ್ರಯತ್ನವಾಗಿದ್ದು, ಕಲೆ ಮತ್ತು ಆಧ್ಯಾತ್ಮಿಕತೆಯನ್ನು ಮೆಚ್ಚುವ ಪ್ರೇಕ್ಷಕರೊಂದಿಗೆ ಇದು ಆಳವಾಗಿ ಪ್ರತಿಧ್ವನಿಸುತ್ತದೆ ಎನ್ನುತ್ತಾರೆ ನಿರ್ದೇಶಕ ಗಿರೀಶ್‍.

ಕನ್ನಡದ ಖ್ಯಾತ ದಾಸ ಸಾಹಿತ್ಯದ ಗಾಯಕ ಡಾ. ವಿದ್ಯಾಭೂಷಣರು, ಈ ಚಿತ್ರದಲ್ಲಿ ಶ್ರೀ ಪುರಂದರದಾಸರಾಗಿ ಕಾಣಿಸಿಕೊಂಡಿದ್ದಾರೆ. ಇತರೆ ಪಾತ್ರಗಳಲ್ಲಿ ಘನಶ್ಯಾಮ್ ಕೆ.ವಿ, ಗೋಕುಲ್ ಅಯ್ಯರ್, ವಾಸುದೇವ ಮೂರ್ತಿ ಕೆ.ಎನ್, ಚಲಪತಿ, ಪ್ರಸನ್ನ ವೆಂಕಟೇಶ ಮೂರ್ತಿ, ಪದ್ಮಕಲಾ ಡಾ. ಜಿ. ಎಲ್ ಹೆಗ್ಡೆ ಮುಂತಾದವರಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ಮಾಣ ಮತ್ತು ನಿರ್ದೇಶನ ಹೊಣೆ ಹೊತ್ತವರು ಗಿರೀಶ್ ನಾಗರಾಜ. ಡಾ. ವಿದ್ಯಾಭೂಷಣರು ಸಂಗೀತ ಸಂಯೋಜಿಸುವುದರ ಜೊತೆಗೆ ಎಲ್ಲಾ ಹಾಡುಗಳನ್ನು ಹಾಡಿದ್ದಾರೆ. ಚಿತ್ರಕ್ಕೆ ರೊಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುಹಾಸ್‍ ಜಯ್‍ ಅವರ ಸಂಕಲನವಿದೆ.

ಭೂಮಿಕಾ

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

37 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago