ಮನರಂಜನೆ

ನಟ ದರ್ಶನ್‌ ಎಡಗೈಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ಡೇವಿಲ್‌ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ನಟ ದರ್ಶನ್ ಕೈಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಅವರ ಕೈಗೆ ಸರ್ಜರಿ ಮಾಡಲಾಗಿದ್ದು. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ದರ್ಶನ್ ತಮ್ಮ ಅಭಿಮಾನಿ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೊ ವೈರಲ್ ಆಗುತ್ತಿದೆ. ಫೋಟೋ ನೋಡಿದ ಫ್ಯಾನ್ಸ್, ಈಗ ಆದಷ್ಟು ಬೇಗ ಗುಣಮುಖರಾಗಿ ಬಾಸ್ ಎಂದು ಪ್ರಾರ್ಥಿನೆ ಮಾಡುತ್ತಿದ್ದಾರೆ.

ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಒಂದು ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಈ ಸಿನಿಮಾಗೆ ದೊಡ್ಡ ಸೆಟ್ ಹಾಕಿ ಫೈಟ್ ಸನ್ನಿವೇಶ ಸೆರೆ ಹಿಡಿಯಲಾಗಿದ್ದು. ಚಿತ್ರೀಕರಣದ ವೇಳೆ ದರ್ಶನ್ ಅವರ ಕೈಗೆ ಪೆಟ್ಟಾಗಿತ್ತು ಎನ್ನಲಾಗಿದೆ. ಕೈ ನೋವಿಗೆ ಪಟ್ಟಿ ಧರಿಸಿ ಮ್ಯಾಟ್ನಿ ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಬಂದಿದ್ದರು. ಈಗ ಶಸ್ತ್ರ ಯಶಸ್ವಿ ಚಿಕಿತ್ಸೆ ಮಾಡಲಾಗಿದ್ದು, ಇದೀಗ ನಟ ದರ್ಶನ್ ವಿಶ್ರಾಂತಿ ಪಡೆಯುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…

6 hours ago

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…

7 hours ago

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…

7 hours ago

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

11 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

12 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

12 hours ago