ಭಾರತದಿಂದ ಅಧಿಕೃತವಾಗಿ ಆಯ್ಕೆ
ನವದೆಹಲಿ: ಆಸ್ಕರ್ ಆವಾರ್ಡ್ ಕಾರ್ಯಕ್ರಮದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್ ರಾವ್ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್ ಸಿನಿಮಾ ಲಾಪತಾ ಲೇಡಿಸ್ ಚಿತ್ರ 2025ರ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.
ಈ ಚಲನಚಿತ್ರವನ್ನು ನಟ ಅಮಿರ್ ಖಾನ್ ನಿರ್ಮಾಣ ಮಾಡಿದ್ದಾರೆ. ವರ್ಷದ ಪ್ರಾರಂಭದಲ್ಲಿ ಬಿಡುಗಡೆಗೊಂಡ ನಂತರ ಎಲ್ಲರಿಂದ ಮೆಚ್ಚುಗೆ ಪಡೆದ ಈ ಸಿನಿಮಾ, ಒಟಿಟಿಯಲ್ಲಿಯೂ ಸಹ ಜನರಿಂದ ಮನ್ನಣೆ ಗಳಿಸಿತ್ತು.
ಲಾಪತಾ ಲೇಡಿಸ್ ಚಿತ್ರವು ಸಿನಿಮಾ ಮಹಿಳೆಯರ ಸಬಲೀಕರಣದ ಕುರಿತು ಇರುವ ಕಥೆಯಾಗಿದೆ. ಇದನ್ನು ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನ ಮಾಡಿದ್ದು, ಅಧಿಕೃತವಾಗಿ ಚೈನ್ನೈನಲ್ಲಿ ʻಭಾರತ ಫಿಲ್ಮ್ ಫೆಡರೇಶನ್ʼ ಸದಸ್ಯರು ಘೋಷಿಸಿದ್ದಾರೆ.
ಈ ಚಿತ್ರದಲ್ಲಿ ನಿಶಾಂತಿ ಗೋಯಾಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ ಕದಮ್ ಹಾಗೂ ರವಿ ಕಿಶನ್ ನಟಿಸಿದ್ದಾರೆ.
ನಿರ್ದೇಶಕ ಕಿರಣ್ ರಾವ್ ಅವರು ದೊಡ್ಡ ಕನಸಾಗಿರುವ ಈ ಚಿತ್ರವೂ ಆಸ್ಕರ್ ಪ್ರಶಸ್ತಿಯನ್ನು ಗೆಲ್ಲಬೇಕೆಂಬುದೇ ಅವರ ಆಶಯವಾಗಿತ್ತು. ಈ ಸಿನಿಮಾ ಮೊದಲು ಟೊರೆಂಟೋ ಇಂಟರ್‌ನ್ಯಾಷನಲ್ ಫೆಸ್ಟಿವಲ್‌ನಲ್ಲಿ ಪ್ರಸಾರವಾಗಿತ್ತು.
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…
ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…