Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ನಮ್ಮ ಗುರು ಇನ್ನು “ಡಾಕ್ಟರ್ ಗುರು!”

ಕನ್ನಡ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಸಂಗೀತ ನಿರ್ದೇಶಕ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್.

ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅವರ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ಸಂತಸ ತಂದಿದೆ.

‘ದೊರೆತ ಗೌರವ ನನ್ನ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ’ ಎಂದು ಗುರುಕಿರಣ್ ಪ್ರತಿಕ್ರಿಯಿಸಿದ್ದಾರೆ.
ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ತೆರಳಿರುವ ಗುರುಕಿರಣ್, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆ ಇದೆ.

ಸದಾಶಿವ ಭಂಡಾರಿ ಹರ್ಷ

ಯಶಸ್ವಿ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ಸಕಲೇಶಪುರದ ಉದ್ಯಮಿ, ಸಮಾಜಮುಖಿ ಚಿಂತಕ ಸದಾಶಿವ ಭಂಡಾರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧಕನಿಗೆ ದೊರೆತ ಅದ್ಭುತ ಗೌರವ ಇದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Tags:
error: Content is protected !!