ಮನರಂಜನೆ

ಹೃತಿಕ್‍ ರೋಶನ್‍ ಅಭಿನಯದಲ್ಲಿ ಹೊಂಬಾಳೆ ಫಿಲಂಸ್‍ ಪ್ಯಾನ್‍ ಇಂಡಿಯಾ ಚಿತ್ರ ನಿರ್ಮಾಣ

ಹೊಂಬಾಳೆ ಫಿಲಂಸ್‍ ಸಂಸ್ಥೆಯು ಕೆಲವು ತಿಂಗಳುಗಳ ಹಿಂದೆ ಪ್ರಭಾಸ್‍ ಅಭಿನಯದಲ್ಲಿ ‘ಸಲಾರ್ 2’ ಸೇರಿದಂತೆ ಮೂರು ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿತ್ತು. ಇದೀಗ ಬಾಲಿವುಡ್‍ ನಟ ಹೃತಿಕ್‍ ರೋಶನ್ ಅಭಿನಯದಲ್ಲಿ ಪ್ಯಾನ್‍ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದೆ.

ಈ ಸಂಬಂಧ, ಬುಧವಾರ ಸೋಷಿಯಲ್‍ ಮೀಡಿಯಾದಲ್ಲಿ ಹೃತಿಕ್‍ ರೋಶನ್‍ ಅಭಿನಯದಲ್ಲಿ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೊಂಬಾಳೆ ಫಿಲಂಸ್‍ ಘೋಷಿಸಿದೆ.

ಈ ಹಿಂದೆ ಪ್ಯಾನ್‍ ಇಂಡಿಯಾ ಚಿತ್ರಗಳನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದೆಯಾದರೂ, ಪೂರ್ಣಪ್ರಮಾಣದಲ್ಲಿ ಹಿಂದಿ ಚಿತ್ರವೊಂದನ್ನು ನಿರ್ಮಿಸಿರಲಿಲ್ಲ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್‍, ಹಿಂದಿ ಚಿತ್ರರಂಗಕ್ಕೂ ಎಂಟ್ರಿ ಕೊಡುತ್ತದೆ ಎಂಬ ಸುದ್ದಿಗಳು ಕೇಳಿಬರುತ್ತಲೇ ಇದ್ದವು. ಅದು ಹೃತಿಕ್‍ ರೋಶನ್‍ ಚಿತ್ರದ ಮೂಲಕ ನಿಜವಾಗಿದೆ.

ಈ ಚಿತ್ರ ಯಾವಾಗ ಪ್ರಾರಂಭವಾಗುತ್ತದೆ, ಯಾರು ನಿರ್ದೇಶನ ಮಾಡುತ್ತಾರೆ, ಯಾವ ತರಹದ ಚಿತ್ರ ಇದಾಗಲಿದೆ, ಯಾರೆಲ್ಲಾ ಇರುತ್ತಾರೆ ಎಂಬ ವಿಷಯಗಳ ಬಗ್ಗೆ ಹೊಂಬಾಳೆ ಫಿಲಂಸ್‍ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಹೃತಿಕ್‍ ರೋಶನ್‍ ಅಭಿನಯದ ‘ವಾರ್ 2’ ಚಿತ್ರವು ಆಗಸ್ಟ್ 15ರಂದು ಬಿಡುಗಡೆಯಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರದ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಈ ಹಾಡಿನಲ್ಲಿ ಹೃತಿಕ್‍ ರೋಶನ್‍ ಮತ್ತು ಜ್ಯೂನಿಯರ್ ಎನ್‍.ಟಿ.ಆರ್ ಇಬ್ಬರೂ ನೃತ್ಯ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಾಡಿನ ಚಿತ್ರೀಕರಣ ಸದ್ಯದಲ್ಲೇ ನಡೆಯಲಿದೆ.

ಸದ್ಯ, ಹೊಂಬಾಳೆ ಫಿಲಂಸ್‍ ಸಂಸ್ಥೆಯು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ರ ಚಿತ್ರವನ್ನು ನಿರ್ಮಿಸುತ್ತಿದ್ದು, ಅಕ್ಟೋಬರ್.02ರಂದು ಈ ಚಿತ್ರ ಬಿಡುಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

38 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

49 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago