ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ನಟಿ ರಚಿತಾ ರಾಮ್ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಒಂದೂವರೆ ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ಇಂದು ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಭೇಟಿ ಮಾಡಿ ಧೈರ್ಯ ಹೇಳಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಟಿ ರಚಿತಾ ರಾಮ್ ಅವರು, ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಜೈಲಿನಲ್ಲಿ ಅವರನ್ನು ನೋಡಲು ಕಷ್ಟ ಆಗುತ್ತಿದೆ. ಎಲ್ಲಾ ನಟ-ನಟಿಯರು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾವೆಲ್ಲರೂ ಅವರ ಬರುವಿಕೆಗಾಗಿ ಕಾಯುತ್ತಿದ್ದೇವೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದೆ. ದರ್ಶನ್ ಸರ್ ಆದಷ್ಟು ಬೇಗ ಹೊರ ಬರುತ್ತಾರೆ. ಈ ಬಗ್ಗೆ ನನಗೆ ನಂಬಿಕೆ ಇದೆ ಎಂದರು.
ಇನ್ನು ರಾಜನನ್ನು ರಾಜನ ಥರಾನೇ ನನಗೆ ನೋಡೋಕೆ ಇಷ್ಟ. ಇಂದು ಅವರನ್ನು ನೋಡಿ ನಿರಾಳವಾಯ್ತು ಎಂದು ಭಾವುಕರಾಗಿದ್ದಾರೆ. ನಾನು ಯಾವಾಗಲು ಅವರ ಕುಟುಂಬಕ್ಕೆ ಆಭಾರಿಯಾಗಿರುತ್ತೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ. ಅವರೇ ನನಗೆ ದರ್ಶನ್ ಸರ್ ಸಮಾಧಾನ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…