ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರವು ನವೆಂಬರ್.14ರಂದು ಮಕ್ಕಳ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.
ಇದನ್ನು ಓದಿ: ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ
ಈ ಚಿತ್ರವನ್ನು ಹೆದ್ದೂರು ಮಂಜುನಾಥ ಶೆಟ್ಟಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯೂ ಅವರದ್ದೇ. ‘ಚಿತ್ರದ ಹೆಸರು ’ಪಾಠಶಾಲಾ’ ಎಂದಿದೆ ಎಂಬ ಕಾರಣಕ್ಕೆ ಇದು ಮಕ್ಕಳ ಚಿತ್ರ ವಲ್ಲ. ಈಗಿನ ಶಿಕ್ಷಣ 80ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ ‘ಓದು ಇಲ್ಲ ಓಡೋಗು’ ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದರು.
‘ಪಾಠಶಾಲಾ’ ಚಿತ್ರದಲ್ಲಿ ಬಾಲಾಜಿ ಮನೋಹರ್, ಕಿರಣ್ ನಾಯಕ್, ಅಕ್ಷಯ್, ಸುಧಾಕರ್ ಬನ್ನಂಜೆ, ಬಾಲ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ ಮತ್ತು ರವಿ ಶೆಟ್ಟಿ ಜೊತೆಯಾಗಿ ನಿರ್ಮಿಸಿದ್ದಾರೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…