ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್ ಸಿಂಗ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.
ಸಂಜಯ್ ಸಿಂಗ್ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್ ಸಿಂಗ್ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.
ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಇನ್ನು ಪವಿತ್ರಾ ಬಗ್ಗೆಯೂ ಸಂಜಯ್ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್ ಸಿಂಗ್ ಮಾತನಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…