ಮನರಂಜನೆ

ಪವಿತ್ರಾ ಗೌಡ ಬಂಧನ: ಮಾಜಿ ಪತಿ ಸಂಜಯ್‌ ಸಿಂಗ್‌ ಪ್ರತಿಕ್ರಿಯೆ ಇದು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್‌ ಸಿಂಗ್‌ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ತಮ್ಮ ಮಗಳ ಹೆಸರನ್ನು ಬಳಸದಂತೆ ಮನವಿ ಮಾಡಿದ್ದಾರೆ.

ಸಂಜಯ್‌ ಸಿಂಗ್‌ ಹಾಗೂ ಪವಿತ್ರಾ ಗೌಡ ಪರಸ್ಪರ ವಿಚ್ಛೇದನ ಪಡೆದು ಹಲವು ವರ್ಷಗಳೇ ಕಳೆದಿದೆ. ಈವರೆಗೆ ಯಾವುದೇ ಸುದ್ದಿಯಲ್ಲಿಲ್ಲದ ಸಂಜಯ್‌ ಸಿಂಗ್‌ ತಮ್ಮ ಮಾಜಿ ಪತ್ನಿ ಕೊಲೆ ಪ್ರಕರಣದಲ್ಲಿ ಸಿಲುಕಿದ ಬಳಿಕ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ.

ನಾನು ಎಲ್ಲಾ ಮಾಧ್ಯಮಗಳ ಬಳಿ ಮನವಿ ಮಾಡುತ್ತೇನೆ. ನನ್ನ ಹೆಸರು, ನನ್ನ ಮಾಜಿ ಪತ್ನಿ ಹೆಸರನ್ನು ಹಾಳು ಮಾಡಿ ಪರವಾಗಿಲ್ಲ. ಆದರೆ ನನ್ನ ಮಗಳು ಇನ್ನು ಚಿಕ್ಕವಳಾಗಿದ್ದು, ಅವಳ ಹೆಸರನ್ನು ಈ ಪ್ರಕರಣದ ಮಧ್ಯೆ ತರಬೇಡಿ. ದಯವಿಟ್ಟು ಹೆಣ್ಣು ಮಕ್ಕಳಿಗೆ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಇನ್ನು ಪವಿತ್ರಾ ಬಗ್ಗೆಯೂ ಸಂಜಯ್‌ ಮಾತನಾಡಿದ್ದು, ಪವಿತ್ರಾ ಕೊಲೆ ಮಾಡುವ ವ್ಯಕ್ತಿಯಲ್ಲ. ಹಾಗಂತ ನಾನು ಆಕೆಯ ಪರ ವಕಾಲತ್ತು ವಹಿಸುತ್ತಿಲ್ಲ. ಆದರೆ ಆಕೆ ಕೊಲೆ ಮಾಡುವ ವ್ಯಕ್ತಿಯಲ್ಲ ಜನರ ಈ ಬಗ್ಗೆ ವಿಚಾರ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಕಾನೂನು ತನಿಖೆ ಮಾಡುತ್ತದೆ ಎಂದು ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಸಂಜಯ್‌ ಸಿಂಗ್‌ ಮಾತನಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago