ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್ ಚಿತ್ರಕ್ಕೆ ಪೈರಸಿ ಕಾಟ ಆರಂಭವಾಗಿದೆ.
ದರ್ಶನ್ ಹಾಗೂ ಕಿಚ್ಚ ಸುದೀಪ್ ನಡುವಿನ ಸ್ಟಾರ್ ವಾರ್ ನಡುವೆಯೇ ಡೆವಿಲ್ ಚಿತ್ರತಂಡ ಪೈರಸಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದೆ.
ಇದನ್ನೂ ಓದಿ:-ಸಚಿವ ಜಮೀರ್ ಅಹಮ್ಮದ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ
ಪೈರಸಿ ಇಂದು ವೈರಸ್‌ನಂತೆ ಹಬ್ಬುತ್ತಿದೆ. ಈವರೆಗೆ 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲಿಟ್ ಮಾಡಲಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೇ ಇಷ್ಟು ದೊಡ್ಡಮಟ್ಟದ ಪೈರಸಿ ಎದುರಾಗಿರಲಿಲ್ಲ ಎಂದು ತಿಳಿಸಿದೆ.
ದಯವಿಟ್ಟು ಯಾರೂ ಪೈರಸಿ ಮಾಡಬೇಡಿ. ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ನೋಡಿ ಎಂದು ಡೆವಿಲ್ ಚಿತ್ರತಂಡ ಮನವಿ ಮಾಡಿದೆ.





