ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಆತನ ಸಹಚರರನ್ನು ಪೊಲೀಸರು ಈಗಾಗಲೇ ಬಂದಿಸಿದ್ದಾರೆ. ಈ ಪ್ರಕರಣ ಪ್ರತಿನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ.
ಜೂನ್.8 ರ ಶನಿವಾರದಂದು ರೇಣುಕಾಸ್ವಾಮಿ ಹತ್ಯೆ ದಿನ ನಟ ದರ್ಶನ್ ಸೇರಿದಂತೆ ಆತನ ಸಹಚರರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ಆರ್ ನಗರದ ಸ್ಟೋನಿ ಬ್ರೂಕ್ ಪಬ್‌ನಲ್ಲಿಂದು ಸ್ಥಳ ಮಹಜರು ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿ ಅಲ್ಲಿಂದ ಠಾಣೆಗೆ ಕರೆದೊಯ್ದರು.
ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು, ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ನಟ ದರ್ಶನ್, ಉದ್ಯಮಿ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.
ಈ ಪಾರ್ಟಿಯಲ್ಲಿ ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರು ಕೂಡಾ ಭಾಗಿಯಾಗಿದ್ದರು ಎನ್ನಲಾಗಿದ್ದು, ದರ್ಶನ್ ಜತೆಯಲ್ಲಿ ಚಿಕ್ಕಣ್ಣ ಕರೆತಂದು ಸ್ಥಳ ಮಹಜರು ಮಾಡಿದರು.
ಇತ್ತ ದರ್ಶನ್ ಅವರನ್ನು ಕರೆತಂದು ಸ್ಥಳ ಮಹಜರು ಮಾಡುವ ಮೊದಲೇ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ ಎನ್ನಲಾಗಿದೆ. ಪಬ್‌ನ ಮೂಲ ಮೂಲೆಗಳನ್ನು ಹುಡುಕಿ ಜಾಲಾಡುವ ಮೂಲಕ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಇನ್ನು ದರ್ಶನ್ ಮತ್ತು ಗ್ಯಾಂಗ್ ಸ್ಥಳ ಮಹಜರಿಗೆ ಆಗಮಿಸುವ ವೇಳೆ ಕೆಂಗೇರಿ ಹಾಗೂ ಆರ್‌ಆರ್ ನಗರ ಪೊಲೀಸರು ಪಬ್ ಸುತ್ತಲೂ ಬಿಗಿಭದ್ರತೆ ಒದಗಿಸಿದ್ದರು.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…