ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು ಎದುರಾಗುತ್ತವೆ. ಶಿವಣ್ಣ ಚುನಾವಣೆ ಪ್ರಚಾರ ಮಾಡುತ್ತಿರುವುದನ್ನು ಕೆಲವರು ಟೀಕಿಸಿದ್ದಾರೆ. ಈ ವಿಚಾರವಾಗಿ ಶಿವಣ್ಣನಿಗೆ ಪ್ರಶ್ನೆ ಎದುರಾದಾಗ ನನಗಗೆ ವಯಸ್ಸು 62 ಆಗಿದೆ. ಮತ ಹಾಕೋಕೆ ಪ್ರಾರಂಭಿಸಿ 42 ವರ್ಷಗಳು ಕಳೆದಿದೆ. ಈಗಲು ರಾಜಕೀಯ ಅರ್ಥ ಆಗಿಲ್ಲ ಅಂದರೆ ಹೇಗೆ? ಎಂದು ಮರುಪ್ರಶ್ನಿಸಿದ್ದಾರೆ.
ಆ ಮೂಲಕ ಯಾರೇ ಟೀಕೆ ಮಾಡಿದರು ನಾನು ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಾತಿನ ಭರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಡಮ್ಮಿ ಕ್ಯಾಂಡಿಡೇಟ್‌ನ್ನು ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…