ಮನರಂಜನೆ

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ ಚಿತ್ರವೊಂದರ ಪ್ರೀ-ರಿಲೀಸ್‍ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಅಮೇರಿಕಾದಲ್ಲಿ ನಡೆದಿದ್ದು, ಇದೇ ಮೊದಲು.

ಈ ಮಧ್ಯೆ, ಚಿತ್ರತಂಡದವರು ಮತ್ತು ರಾಮ್‍ಚರಣ್‍ ಅಭಿಮಾನಿಗಳು ಹೊಸದೊಂದು ದಾಖಲೆಯನ್ನು ಮಾಡಿದ್ದಾರೆ. ಚಿತ್ರದ ಇನ್ನೊಂದು ಪ್ರೀ-ರಿಲೀಸ್‍ ಕಾರ್ಯಕ್ರಮವು ಜನವರಿ ಒಂದರಂದು ವಿಜಯವಾಡದಲ್ಲಿ ನಡೆಯಲಿದೆ. ಅಲ್ಲಿನ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರಾಮ್‌ಚರಣ್ ಅವರ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದು ಭಾರತದ ಅತೀ ದೊಡ್ಡ ಕಟೌಟ್ ಎನ್ನುವ ದಾಖಲೆಯನ್ನು ಬರೆದಿದೆ.

ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳು ರಾಕಿಂಗ್ ಸ್ಟಾರ್ ಯಶ್ ಅವರ 236 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದರು. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಸೂರ್ಯ ಅವರ ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ ದಾಖಲೆ ಬರೆದಿದ್ದರು. ಇನ್ನು ಕಳೆದ ವರ್ಷ ಪ್ರಭಾಸ್ ಅಭಿಮಾನಿಗಳು 230 ಅಡಿ ಕಟೌಟ್ ನಿಲ್ಲಿಸಿದ್ದು ಕೂಡ ದಾಖಲೆಯ ಪುಟಗಳಿಗೆ ಸೇರಿಕೊಂಡಿತ್ತು. ಇದೀಗ ರಾಮ್‌ಚರಣ್ ಅಭಿಮಾನಿಗಳು ಈ ಎಲ್ಲ ದಾಖಲೆಗಳನ್ನು ಮುರಿದು, ತಮ್ಮ ನೆಚ್ಚಿನ ನಟನ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಸಂಭ್ರಮಿಸಿದ್ದಾರೆ.

ತೆಲುಗಿನ ಜನಪ್ರಿಯ ನಿರ್ಮಾಪಕ ‘ದಿಲ್’ ರಾಜು, ಈ ಚಿತ್ರವನ್ನ ತಮ್ಮ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ. ‘ಗೇಮ್‍ ಚೇಂಜರ್’ ಚಿತ್ರದಲ್ಲಿ ರಾಮ್‍ಚರಣ್‍ ತೇಜ IAS ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ. ಮಿಕ್ಕಂತೆ ಅಂಜಲಿ, ಎಸ್.ಜೆ. ಸೂರ್ಯ, ನಾಸರ್, ಶ್ರೀಕಾಂತ್, ಸಮುದ್ರಕಣಿ, ಜಯರಾಮ್‍, ಸುನೀಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಕಾರ್ತಿಕ್‍ ಸುಬ್ಬರಾಜ್‍ ಕಥೆ ಬರೆದಿದ್ದು, ಎಸ್‍.ಎಸ್.ಥಮನ್‍ ಸಂಗೀತ ಮತ್ತು ರತ್ನವೇಲು ಛಾಯಾಗ್ರಹಣ ಈ ಚಿತ್ರಕ್ಕಿದೆ.

 

 

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

29 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

55 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

58 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago