ಪ್ರಜ್ವಲ್ ದೇವರಾಜ್ ಅಭಿನಯದಲ್ಲಿ ನಿರ್ದೇಶಕ ಲೋಹಿತ್, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ ಘೋಷಣೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲೇ ಇಲ್ಲ. ಈಗ ಆ ಚಿತ್ರ ಬಿಡುಗಡೆಗೂ ಮೊದಲೇ, ಈ ಜೋಡಿ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದೆ. ಅದು ‘ರಾಕ್ಷಸ’ ಚಿತ್ರದ ಮೂಲಕ.
‘ರಾಕ್ಷಸ’ ಚಿತ್ರವು ಒಂದು ಹಾರರ್ ಚಿತ್ರವಾಗಿದ್ದು, ಇದೇ ಮೊದಲ ಬಾರಿಗೆ ಪ್ರಜ್ವಲ್ ಈ ಶೈಲಿಯ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಜೊತೆಗೆ ಟೈಮ್ ಲೂಪ್ ಪರಿಕಲ್ಪನೆಯೂ ಇದೆಯಂತೆ. ಈ ಹಿಂದೆ ‘ಮಮ್ಮಿ’, ‘ದೇವಕಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಲೋಹಿತ್‍ಗೆ ಇದು ಪ್ರಜ್ವಲ್ ಜೊತೆಗೆ ಎರಡನೇ ಚಿತ್ರ.
ಈ ಚಿತ್ರವು ಕಳೆದ ವರ್ಷದ ಕೊನೆಯಲ್ಲೇ ಬಿಡುಗಡೆ ಆಗಲಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ‘UI’ ಮತ್ತು ‘ಮ್ಯಾಕ್ಸ್’ ಚಿತ್ರಗಳು ಬಿಡುಗಡೆಯಾದ ಕಾರಣ, ಚಿತ್ರವು ಈ ವರ್ಷಕ್ಕೆ ಮುಂದೂಲ್ಪಟ್ಟಿತ್ತು. ಈಗ ಚಿತ್ರದ ಬಿಡುಗಡೆಗೆ ಮುಹೂರ್ತ ಸಿಕ್ಕಿದ್ದು, ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರವು ಫೆ..26ರಂದು ಚಿತ್ರ ಬಿಡುಗಡೆಯಾಗಲಿದೆ.
ಪ್ರಜ್ವಲ್ ಜೊತೆಗೆ ಈ ಚಿತ್ರದಲ್ಲಿ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ‘ರಾಕ್ಷಸ’ ಸಿನಿಮಾದ ಶೇ.80ರಷ್ಟು ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿರುವುದು ವಿಶೇಷ. ಪೊಲೀಸ್ ಸ್ಟೇಷನ್ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ರಾಮೇಶ್ವರಂ, ಗೋವಾ ಮತ್ತು ಬೆಂಗಳೂರಿನಲ್ಲಿ ಉಳಿದ ಭಾಗದ ಚಿತ್ರೀಕರಣ ನಡೆಸಲಾಗಿದೆಯಂತೆ.
ಶಾನ್ವಿ ಎಂಟರ್‌ಟೈನ್‌ಮೆಂಟ್ ನಡಿ ದೀಪು ಬಿ.ಎಸ್ ನಿರ್ಮಿಸಿರುವ ಈ ಚಿತ್ರದ ನಿರ್ಮಾಣದಲ್ಲಿ ನವೀನ್ ಹಾಗೂ ಮಾನಸ ಕೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಮತ್ತು ವರುಣ್ ಉನ್ನಿ ಸಂಗೀತ ನಿರ್ದೇಶನವಿದೆ.
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…